ಬಳ್ಳಾರಿ ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್ ನಿವಾಸದಲ್ಲಿ ಅಧಿಕಾರಿಗಳ ತಪಾಸಣೆ
ಬಳ್ಳಾರಿ: ಬಳ್ಳಾರಿ ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಮುಂಜಾನೆ ದಾಳಿ ಮಾಡಿದ್ದಾರೆ.
ರಾಮಾಂಜಿನೇಯನಗರದ ಲೋಕೇಶ್ ನಿವಾಸ ಮಾತ್ರವಲ್ಲದೇ ಅವರ ಸಂಬಂಧಿಕರು, ಸ್ನೇಹಿತರ ನಿವಾಸಗಳಲ್ಲೂ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಆರಂಭಿಸಿದರು.
ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದ್ದು, ಚಿನ್ನಾಭರಣ, ನಗದು ಆಸ್ತಿ ದಾಖಲೆ ಪತ್ರಗಳ ಪರಿಶೀಲಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಪರಿಶೀಲನೆ ಮುಂದುವರಿದಿದೆ ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಿದ್ದರಾಜು ಪ್ರಜಾವಾಣಿಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.