ಸಾವು
– ಸಾಂದರ್ಭಿಕ ಚಿತ್ರ
ಸಿರುಗುಪ್ಪ: ನಗರದ ಪತಂಗೆ ಪೆಟ್ರೊಲ್ ಬಂಕ್ ಬಳಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ತಾಳೂರು ಗ್ರಾಮದ ಕೆ.ಲಿಂಗಮ್ಮ (54) ಮೃತರು. ಬೈಕ್ ಚಲಾಯಿಸುತ್ತಿದ್ದ ಕೆ.ವೀರಭದ್ರಪ್ಪ ಗಂಭೀರ ಗಾಯಗೊಂಡು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.