ಬಳ್ಳಾರಿ: ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಬುಧವಾರ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರ ಸ್ಮರಣೆ ನಡೆಯಿತು.
ಎನ್‌ಎಸ್‌ಎಸ್ ಕೋಶದ ವತಿಯಿಂದ ಹಮ್ಮಿಕೊಂಡಿದ್ದ ಶ್ರಮದಾನ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮವನ್ನು ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಉದ್ಘಾಟಿಸಿದರು.
ಸುಮಾರು 7 ಸಾವಿರ ಅನಾಥ ಶವಗಳ ಸಂಸ್ಕಾರ ಮಾಡಿದ ಶವಾಗಾರ ನಿರ್ವಾಹಕ ಅಂದ್ರಯ್ಯ, ಅಂಗನವಾಡಿ ಕಾರ್ಯಕರ್ತೆ ಮಹಾಲಕ್ಷ್ಮೀ, ಆರೋಗ್ಯ ಇಲಾಖೆಯ ಡಿ.ಸುನಿತಾ, ತ್ಯಾಜ್ಯ ನಿರ್ವಹಣೆ ಮಾಡುವ ಶ್ರೀನಿವಾಸುಲು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರು ಹೀಗೆ ಸುಮಾರು 23 ವಿವಿಧ ಕ್ಷೇತ್ರಗಳಲ್ಲಿ ಅವಿರತ ಸೇವೆ ಸಲ್ಲಿಸುತ್ತಿರುವ ಸಮಾಜದ ಕೆಳಹಂತದ ಸೇವಾ ಕಾರ್ಯಕರ್ತರನ್ನು ಗುರುತಿಸಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ವಿವಿ ಕುಲಸಚಿವ ರುದ್ರೇಶ್, ಎನ್‌ಎಸ್‌ಎಸ್ ಸಂಯೋಜಕ ಕುಮಾರ್, ಶಶಿಧರ್ ಕೆಲ್ಲೂರ್, ವಿವಿಯ ಬೋಧಕ ಬೋಧಕೇತರ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.