ಹೂವಿನಹಡಗಲಿ: ತಾಲ್ಲೂಕಿನ ಐತಿಹಾಸಿಕ ಸುಕ್ಷೇತ್ರ ಮೈಲಾರದಲ್ಲಿ ಮೈಲಾರಲಿಂಗೇಶ್ವರ ಗಂಗಿಮಾಳಮ್ಮ ದೇವಿ ಕಲ್ಯಾಣೋತ್ಸವ ಮೇ 9 ರಂದು ನೆರವೇರಲಿದ್ದು, ಸುಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮ ಜರುಗಿದವು.
ಸ್ವಾಮಿಯ ಉತ್ಸವ ಮೂರ್ತಿ ಪಲ್ಲಕ್ಕಿಯ ಮೆರವಣಿಗೆಯಲ್ಲಿ ತುಂಗಭದ್ರಾ ನದಿ ತೀರಕ್ಕೆ ತೆರಳಿ ಗಂಗಾಪೂಜೆ ನೆರವೇರಿಸಲಾಯಿತು. ಬಳಿಕ ದೇವಸ್ಥಾನದಲ್ಲಿ ಮೈಲಾರಲಿಂಗ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಅರ್ಚಕ ಪ್ರಮೋದ್ ಭಟ್ ಪೂಜಾ ಕೈಂಕರ್ಯ ನೆರವೇರಿಸಿದರು.
ಮೇ 12 ರಂದು ರಾತ್ರಿ 9 ಗಂಟೆಗೆ ಮೈಲಾರಲಿಂಗೇಶ್ವರ ರಥೋತ್ಸವ ಜರುಗಲಿದೆ. ಕಲ್ಯಾಣೋತ್ಸವ ಪ್ರಯುಕ್ತ ಜರುಗುವ ರಥೋತ್ಸವದಲ್ಲಿ ನಾಡಿನ ನಾನಾ ಭಾಗಗಳಿಂದ ನವವಧುವರರು ಪಾಲ್ಗೊಂಡು ದರ್ಶನ ಪಡೆಯುವುದು ವಿಶೇಷ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.