ಸಾವು
(ಪ್ರಾತಿನಿಧಿಕ ಚಿತ್ರ)
ಸಂಡೂರು: ತಾಲ್ಲೂಕಿನ ತಾಳೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ವಿದ್ಯುತ್ ಕಂಬ ಹತ್ತುವಾಗ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಮಂಜುನಾಥ (36) ಮೃತರು. ಅವರು ತಮ್ಮ ಜಮೀನಿನಲ್ಲಿನ ವಿದ್ಯುತ್ ಕಂಬವನ್ನು ಹತ್ತುವಾಗ ಆಯತಪ್ಪಿ ಬಿದ್ದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ತೋರಣಗಲ್ಲು ಗ್ರಾಮದಲ್ಲಿನ ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.