ADVERTISEMENT

ಮರಿಯಮ್ಮನಹಳ್ಳಿ | ಕ್ರಿಮಿನಾಶಕ ಸೇವನೆ; ಚಿಕಿತ್ಸೆ ಫಲಿಸದೆ ಗಾಯಾಳು ಸಾವು

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 16:06 IST
Last Updated 28 ಜೂನ್ 2025, 16:06 IST
<div class="paragraphs"><p>ಸಾವು</p></div>

ಸಾವು

   

ಪ್ರಾತಿನಿಧಿಕ ಚಿತ್ರ

ಮರಿಯಮ್ಮನಹಳ್ಳಿ: ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡು ಕೊಪ್ಪಳ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮರಿಯಮ್ಮನಹಳ್ಳಿ ತಾಂಡಾದ ಚಂದ್ರನಾಯ್ಕ(30) ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗಿನ ಜಾವ ಸಾವನ್ನಪ್ಪಿದ್ದಾರೆ.

ADVERTISEMENT

ಮದ್ಯವ್ಯಸನಿಯಾದ್ದ ಚಂದ್ರನಾಯ್ಕ ಅವರು ಮಂಗಳವಾರ ರಾತ್ರಿ ಮದ್ಯದ ಅಮಲಿನಲ್ಲಿ ಮನೆಯಲ್ಲಿದ್ದ ಕ್ರಿಮಿನಾಶಕವನ್ನು ಸೇವಿಸಿದ್ದಾನೆ. ತೀವ್ರ ಆಸ್ವಸ್ಥಗೊಂಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆಯಿಂದ ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಡಿಕ್ಕಿ: ಚಾಲಕನಿಗೆ ತೀವ್ರಗಾಯ

ಮರಿಯಮ್ಮನಹಳ್ಳಿ: ಸಮೀಪದ ಮಗಿಮಾವಿನಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಶುಕ್ರವಾರ ಮಧ್ಯಾಹ್ನ ಚಲಿಸುತ್ತಿದ್ದ ಲಾರಿಯೊಂದು ತಕ್ಷಣ ವೇಗ ಕಡಿಮೆ ಮಾಡಿದ್ದರಿಂದ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅದರ ಚಾಲಕ ತೀವ್ರಗಾಯಗೊಂಡಿದ್ದಾನೆ.

ಸಮೀಪದ ನಂದಿಬಂಡಿ ಗ್ರಾಮದ ಚಾಲಕ ಅಮರೇಶ್(25) ತೀವ್ರಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯಲ್ಲ ಟ್ರೊಮೋಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಹಿಂದಿನಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದ ಚಾಲಕ ಅಮರೇಶ್ ಸುಮಾರು ಎರಡು ತಾಸಿಗೂ ಹೆಚ್ಚುಕಾಲ ಸಿಲುಕಿಕೊಂಡಿದ್ದಾನೆ. ನಂತರ ಸಾರ್ವಜನಿಕರು, ಪೊಲೀಸರು, ಅಗ್ನಿ ಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ ಹಾಗೂ ಟೋಲ್ ಸಿಬ್ಬಂದಿಗಳ ಸಹಾಯದಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.