
ಸಂಡೂರು: ತಾಲ್ಲೂಕಿನ ಚೋರುನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜನಹಳ್ಳಿ ಕೆರೆಗೆ ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಮೀನುಗಾರಿಕೆಯ ಇಲಾಖೆ, ವಿವಿಧ ಮಹಿಳಾ ಸಂಜೀವಿನಿ ಒಕ್ಕೂಟಗಳ ಸಹಯೋಗದಲ್ಲಿ ಮಸ್ತ್ಯ ಸಂಜೀವಿನಿ ಯೋಜನೆಯಡಿಯಲ್ಲಿ ಶುಕ್ರವಾರ 1.40 ಲಕ್ಷ ಬಿತ್ತನೆ ಮೀನು ಮರಿಗಳನ್ನು ಬಿಡಲಾಯಿತು.
ಬಳಿಕ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಮಾತನಾಡಿ, ‘ಗ್ರಾಮೀಣ ಪ್ರದೇಶದ ಮಹಿಳೆಯರ ಆರ್ಥಿಕ ಸಬಲೀಕರಣ, ಹೆಚ್ಚಿನ ಆದಾಯಗಳಿಸಲು ಮೀನು ಸಾಕಾಣಿಕೆಯ ಕೃಷಿಯು ಬಹಳ ಅನುಕೂಲವಾಗಿದ್ದು, ಸರ್ಕಾರದ ಮೀನು ಸಾಕಾಣಿಕೆಯ ಯೋಜನೆಯನ್ನು ಮಹಿಳೆಯರು ಸಮರ್ಪಕವಾಗಿ, ಸಕಾಲಕ್ಕೆ ಬಳಕೆ ಮಾಡಿಕೊಳ್ಳಬೇಕು’ ಎಂದರು.
ಸಂಡೂರಿನ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ, ಚೋರುನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಜಿನಮ್ಮ, ಉಪಾಧ್ಯಕ್ಷೆ ಗೀತಮ್ಮ, ಸಂಜೀವಿನಿ ಯೋಜನೆಯ ವ್ಯವಸ್ಥಾಪಕ ಸೋಮಶೇಖರ್, ವಿವಿಧ ಮಹಿಳಾ ಸಂಘಗಳ ಸದಸ್ಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.