ADVERTISEMENT

150 ಅಡಿ ಧ್ವಜಸ್ತಂಭದಲ್ಲಿ ಧ್ವಜಾರೋಹಣ: ವಿಜಯನಗರ ವಿಜಯೋತ್ಸವಕ್ಕೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 2:30 IST
Last Updated 26 ಜನವರಿ 2021, 2:30 IST
   

ಹೊಸಪೇಟೆ: ಗಣರಾಜ್ಯೋತ್ಸವದ ಪ್ರಯುಕ್ತ ನಗರದ ರೋಟರಿ ವೃತ್ತದಲ್ಲಿನ 150 ಅಡಿ ಧ್ವಜಸ್ತಂಭದಲ್ಲಿ ಮೂಕಸೌಕರ್ಯ, ವಕ್ಫ್ ಮತ್ತು ಹಜ್ ಖಾತೆ ಸಚಿವ ಆನಂದ್ ಸಿಂಗ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ ಸಚಿವರು, ಗಣರಾಜ್ಯೋತ್ಸವದ ಆಶಯಗಳು ಈಡೇರಬೇಕಾದರೆ ದೀನ ದಲಿತರು ಮುಖ್ಯವಾಹಿನಿಗೆ ಬರಬೇಕು. ಅವರಿಗೆ ಎಲ್ಲ ಹಕ್ಕುಗಳು ಸಿಗಬೇಕು ಎಂದರು.

ಈಗಾಗಲೇ ವಿಜಯನಗರ ಜಿಲ್ಲೆ ಘೋಷಣೆಯಾಗಿದೆ. ಅಧಿಕೃತ ಅಧಿಸೂಚನೆ ಹೊರಬೀಳುವುದಷ್ಟೇ ಉಳಿದಿದೆ. ಕೆಲವೇ ದಿನಗಳಲ್ಲಿ ಆದೇಶವಾಗುತ್ತದೆ ಎಂಬ ಭರವಸೆ ಇದೆ. ವಿಜಯನಗರ ವಿಜಯೋತ್ಸವಕ್ಕೆ ಈಗಾಗಲೇ ದೊಡ್ಡ ಮಟ್ಟದ ಸಿದ್ಧತೆ ನಡೆದಿದೆ. ಇಡೀ ರಾಜ್ಯ ನೋಡುವಂತೆ ವಿಜಯನಗರ ವಿಜಯೋತ್ಸವ ಆಚರಿಸಲಾಗುವುದು. ಮುಖ್ಯಮಂತ್ರಿ ಸೇರಿದಂತೆ ಅನೇಕ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ADVERTISEMENT

ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ಬಸವರಾಜ, ತಹಶೀಲ್ದಾರ್ ಎಚ್. ವಿಶ್ವನಾಥ್, ಡಿವೈಎಸ್ಪಿ ವಿ. ರಘುಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.