ADVERTISEMENT

ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ಆನಂದ್‌ ಸಿಂಗ್‌

ಸಚಿವ ಆನಂದ್‌ ಸಿಂಗ್‌ ಅಧಿಕಾರಿಗಳಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 13:45 IST
Last Updated 27 ಏಪ್ರಿಲ್ 2021, 13:45 IST
ಸಚಿವ ಆನಂದ್‌ ಸಿಂಗ್‌ ಅವರು ಮಂಗಳವಾರ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹೊಸಪೇಟೆಯ ಹರಿಹರ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ, ಮೇಲು ಸೇತುವೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಸಚಿವ ಆನಂದ್‌ ಸಿಂಗ್‌ ಅವರು ಮಂಗಳವಾರ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹೊಸಪೇಟೆಯ ಹರಿಹರ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ, ಮೇಲು ಸೇತುವೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಹೊಸಪೇಟೆ (ವಿಜಯನಗರ): ‘ನಗರದ ಹೊರವಲಯದಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಮೇಲು ಸೇತುವೆ ನಿರ್ಮಾಣ ಕಾಮಗಾರಿ ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು’ ಎಂದು ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್, ಇಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ‘ಅನಂತಶಯನಗುಡಿ ರೈಲ್ವೆ ಗೇಟ್ ಬಳಿ ನಿರ್ಮಾಣಗೊಳ್ಳಲಿರುವ ಸೇತುವೆ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು. ಹರಿಹರ ರಸ್ತೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬವಾಗುತ್ತಿದ್ದು, ಅಪಘಾತಗಳು ಹೆಚ್ಚಾಗುತ್ತಿವೆ. ಹೆದ್ದಾರಿ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಬೇಕು’ ಎಂದು ನಿರ್ದೇಶನ ನೀಡಿದರು.

‘ನಗರದಲ್ಲಿ ವಿಜಯನಗರ ತರಕಾರಿ ಮಾರುಕಟ್ಟೆ ನಿರ್ಮಾಣ ಪ್ರಕ್ರಿಯೆ ನನೆಗುದಿಗೆ ಬಿದ್ದಿದೆ. ಮಾರುಕಟ್ಟೆ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಕೆಲಸ ಆರಂಭಿಸಬೇಕು’ ಎಂದು ತಿಳಿಸಿದರು.

ADVERTISEMENT

ಇದಕ್ಕೂ ಮುನ್ನ ಸಚಿವರು ಹರಿಹರ ರಸ್ತೆಯಲ್ಲಿನ ನನೆಗುದಿಗೆ ಬಿದ್ದಿರುವ ಮೇಲು ಸೇತುವೆ, ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಜಯನಗರ ವಿಶೇಷ ಅಧಿಕಾರಿ ಪಿ. ಅನಿರುದ್ಧ ಶ್ರವಣ್‌, ಉಪವಿಭಾಗಧಿಕಾರಿ ಸಿದ್ದರಾಮೇಶ್ವರ, ಡಿವೈಎಸ್ಪಿ ವಿ.ರಘುಕುಮಾರ್, ತಹಶೀಲ್ದಾರ್ ಎಚ್.ವಿಶ್ವನಾಥ್, ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಕಿಶೋರ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.