ADVERTISEMENT

ಶಾಸಕ ಯತ್ನಾಳ್‌ ಉಚ್ಛಾಟನೆಗೆ ಸಚಿವ ಕೆ.ಎಸ್‌. ಈಶ್ವರಪ್ಪ‌ ಶಿಫಾರಸು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 15:21 IST
Last Updated 21 ಅಕ್ಟೋಬರ್ 2020, 15:21 IST
ಸಚಿವ ಕೆ.ಎಸ್‌.ಈಶ್ವರಪ್ಪ
ಸಚಿವ ಕೆ.ಎಸ್‌.ಈಶ್ವರಪ್ಪ   

ಬಳ್ಳಾರಿ: 'ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ‌ ಉಚ್ಛಾಟನೆ ಮಾಡಬೇಕು ಎಂದು ರಾಜ್ಯ ಘಟಕದ ಅಧ್ಯಕ್ಷ‌ ನಳಿನ್ ಕುಮಾರ್ ಕಟೀಲ್ ಅವರಿಗೆ ಶಿಫಾರಸು ಮಾಡಲಾಗಿದೆ' ಎಂದು ಗ್ರಾಮೀಣಾಭಿವೃದ್ಧಿ ಮತ್ತು‌ ಪಂಚಾಯತ್ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ‌ ತಿಳಿಸಿದರು.

ನಗರದಲ್ಲಿ ಬುಧವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಯತ್ನಾಳ್ ಹುಚ್ಚಾಟದ ಹೇಳಿಕೆ ನೀಡಿದ್ದಾರೆ. ಅವರಿಗೆ ಶಿಸ್ತು ಇಲ್ಲದಿರಬಹುದು. ಆದರೆ ಪಕ್ಷಕ್ಕೆ ಶಿಸ್ತಿದೆ. ಇಂಥ ಅಶಿಸ್ತನ್ನು ಸಹಿಸುವುದಿಲ್ಲ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT