ಹರಪನಹಳ್ಳಿ: ತಾಲ್ಲೂಕಿನ ಕಣಿವಿಹಳ್ಳಿ ಗ್ರಾಮಕ್ಕೆ ಟ್ಯಾಂಕರ್ ಮೂಲಕ ಶುದ್ದ ಕುಡಿಯುವ ನೀರು ಸರಬರಾಜು ಮಾಡುವಂತೆ ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಮತ್ತು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಲುಷಿತ ನೀರು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ. ವರದಿ ಕೈಸೇರಿದ ಬಳಿಕ ಶಾಶ್ವತ ಕ್ರಮಗಳನ್ನು ಜರುಗಿಸಲಾಗುವುದು. ಅಸ್ವಸ್ಥಗೊಂಡಿರುವವರು ಗುಣಮುಖರಾಗುವವರೆಗೆ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತದೆ. ಆಸ್ಪತ್ರೆಯಲ್ಲಿ ಇರುವವರ ಕಾಳಜಿ ವಹಿಸಬೇಕು ಎಂದು ತಿಳಿಸಿದ್ದಾರೆ.
ಕಲುಷಿತ ನೀರು ಸೇವಿಸಿ 20 ಜನ ಅಸ್ವಸ್ಥರಾಗಿದ್ದಾರೆ. ಈ ಪೈಕಿ ಎಂಟು ಮಂದಿ ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಬ್ಬರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪಿಸಿ, ತುರ್ತು ಚಿಕಿತ್ಸೆಗೆ ಅನುಕೂಲ ಮಾಡಿಕೊಡಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.