ಬಳ್ಳಾರಿ: ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಜ.25 ಮತ್ತು 26 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಶನಿವಾರ ಬೆಳಿಗ್ಗೆ 11.30ಕ್ಕೆ ಬಳ್ಳಾರಿಗೆ ಆಗಮಿಸಲಿರುವ ಅವರು, ಮಧ್ಯಾಹ್ನ 2 ಗಂಟೆಗೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3ಕ್ಕೆ ಜಿಲ್ಲಾಡಳಿತನ ಭವನದ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಜ.26 ರಂದು ಬೆಳಿಗ್ಗೆ 8ಕ್ಕೆ ಡಾ.ರಾಜ್‌ಕುಮಾರ್ ಉದ್ಯಾನದಲ್ಲಿನ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಲಿದ್ದಾರೆ. ಬೆಳಿಗ್ಗೆ 8.10ಕ್ಕೆ ನಗರದ ಎಚ್.ಆರ್.ಗವಿಯಪ್ಪ ವೃತ್ತ(ಮೋತಿ ಸರ್ಕಲ್)ದಲ್ಲಿರುವ 150 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸುವರು. ನಂತರ 8.30ಕ್ಕೆ ಬಳ್ಳಾರಿ ವೈದ್ಯಕೀಯ ಕಾಲೇಜು ಮುಂಭಾಗದ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಗೌರವ ಸಮರ್ಪಣೆ ಮಾಡಲಿದ್ದಾರೆ.
ಬೆಳಿಗ್ಗೆ 9ಗಂಟೆಗೆ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ (ವಿಮ್ಸ್) ಮೈದಾನದ 76ನೇ ಗಣರಾಜ್ಯೋತ್ಸವದ ರಾಷ್ಟ್ರ ಧ್ವಜಾರೋಹಣದಲ್ಲಿ ಪಾಲ್ಗೊಳ್ಳುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.