ADVERTISEMENT

ಸಚಿವ ಜಮೀರ್ ಬಳ್ಳಾರಿ ಜಿಲ್ಲಾ ಪ್ರವಾಸ ಇಂದು: ವಿವಿಧ ಕಾರ್ಯಕ್ರಮದಲ್ಲಿ ಭಾಗಿ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 2:55 IST
Last Updated 4 ಜನವರಿ 2026, 2:55 IST
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್   

ಬಳ್ಳಾರಿ: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಜ.4ರಂದು ಬಳ್ಳಾರಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಮಧ್ಯಾಹ್ನ 12 ಗಂಟೆಗೆ ಬಳ್ಳಾರಿ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಕರ್ನಾಟಕ ಗಣಿಭಾದಿತ ಪುನಃಶ್ಚೇತನ ಅಭಿವೃದ್ಧಿ ನಿಗಮ ಯೋಜನೆಯಡಿ ಗಣಿಭಾದಿತ ಬಳ್ಳಾರಿ ತಾಲ್ಲೂಕಿನ 10 ಗ್ರಾಮಗಳ 862 ವಸತಿ ರಹಿತರಿಗೆ ವಸತಿ ಒದಗಿಸಲು ಯೋಜನೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 12.30 ಕ್ಕೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026 ರ ಅಂಗವಾಗಿ ರಾಷ್ಟೀಯ ಆಹಾರ ಭದ್ರತಾ ಹಾಗೂ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟ ತಾಂತ್ರಿಕ ಕಾರ್ಯಾಗಾರ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.