ADVERTISEMENT

ಆ.15ರಿಂದ 3 ದಿನ ಜಮೀರ್‌ ಬಳ್ಳಾರಿ ಪ್ರವಾಸ 

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2024, 15:41 IST
Last Updated 12 ಆಗಸ್ಟ್ 2024, 15:41 IST
ಜಮೀರ್ ಅಹ್ಮದ್ ಖಾನ್
ಜಮೀರ್ ಅಹ್ಮದ್ ಖಾನ್   

ಬಳ್ಳಾರಿ: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಆ.15, 16 ಮತ್ತು 17 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 

ಆ.15 ರಂದು ಮಧ್ಯಾಹ್ನ 2ಗಂಟೆಗೆ ಬಳ್ಳಾರಿಗೆ ಬರಲಿರುವ ಅವರು ಸಂಜೆ 5.30ಕ್ಕೆ ಸಂಸದರೊಂದಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಬಳ್ಳಾರಿ ನಗರದ ಪ್ರವಾಸಿ ಮಂದಿರದಲ್ಲಿ ತಂಗಲಿದ್ದಾರೆ. 16ರಂದು ಬಳ್ಳಾರಿಯಲ್ಲೇ ಉಳಿಯಲಿರುವ ಅವರು, 17 ರಂದು ಬೆಳಗ್ಗೆ ರಾಯಲ್ ಫೋರ್ಟ್ ಹೋಟೆಲ್‌ನಲ್ಲಿ ಪಕ್ಷದ ಸಭೆಯಲ್ಲಿ ಭಾಗವಹಿಸುವರು.

ಬಳಿಕ 10.30ರಿಂದ ಮಧ್ಯಾಹ್ನ 1.30ರ ವರೆಗೆ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಸಭಾ ಭವನದಲ್ಲಿ ಜನತಾ ದರ್ಶನ ನಡೆಸುವರು.

ADVERTISEMENT

ಮಧ್ಯಾಹ್ನ 3 ಗಂಟೆಯಿಂದ ಸಂಜೆ 6ರ ವರೆಗೆ ಜಿಲ್ಲಾ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.