ಹರಪನಹಳ್ಳಿ (ವಿಜಯನಗರ ಜಿಲ್ಲೆ): ಇಲ್ಲಿಯ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರ ಕಚೇರಿಯಿಂದ ಗುರುವಾರ ನಸುಕಿನಲ್ಲಿ ₹2.5 ಲಕ್ಷ ನಗದು ಮತ್ತು ₹10.80 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣ ಕಳವು ಆಗಿದೆ.
‘ಲತಾ ಅವರು ಬೆಂಗಳೂರಿನಲ್ಲಿದ್ದರು. ಅವರ ಕಚೇರಿ ಸಿಬ್ಬಂದಿ ಬುಧವಾರ ಸಂಜೆ ಬಾಗಿಲಿಗೆ ಬೀಗ ಹಾಕಿದ್ದರು. ಗುರುವಾರ ಬೆಳಿಗ್ಗೆ ಘಟನೆ ನಡೆದಿರುವುದು ಗೊತ್ತಾಗಿದೆ. ಮುಖವನ್ನು ಮರೆಮಾಚಿಕೊಂಡಿದ್ದ ಇಬ್ಬರು, ಬಾಗಿಲಿನ ಚಿಲಕ ಮುರಿದು ಒಳನುಗ್ಗಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.