ಕಂಪ್ಲಿ: ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಆ.15ರಂದು ‘ಸಂಚಾರದಲ್ಲಿ ಮೊಬೈಲ್ ಬಿಡಿ, ಜಾಗೃತೆಯಿಂದ ಮನೆಗೆ ನಡಿ’ ಎನ್ನುವ ಶೀರ್ಷಿಕೆಯಡಿ ಬೆಂಗಳೂರಿನಲ್ಲಿ ಮ್ಯಾರಥಾನ್ ನಡೆಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.29ರಂದು ಪತ್ರ ಬರೆದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಎರಡು ಗಂಟೆ ಕಾಲ ಬಲಗೈಯಲ್ಲಿ ರಾಷ್ಟ್ರಧ್ವಜ, ಎಡಗೈಯಲ್ಲಿ ಜಾಗೃತಿ ಭಿತ್ತಿ ಪತ್ರ ಹಿಡಿದು 14 ಕಿ.ಮೀ ಮ್ಯಾರಥಾನ್ ಓಟ ನಡೆಸಿ ರಾಜ್ಯದ ಗಮನ ಸೆಳೆಯುವ ಮೂಲಕ ಸಾಮಾಜಿಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಮ್ಮ ಕಳಕಳಿ ವಿಶಿಷ್ಟ ಪ್ರಯತ್ನ ಅಭಿನಂದನಾರ್ಹ. ತಾವು ಇದೇ ರೀತಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ರಾಜ್ಯದ ಕೀರ್ತಿ ಇನ್ನಷ್ಟು ಎತ್ತರಕ್ಕೆ ಏರುವಂತಾಗಲಿ ಎಂದು ಹಾರೈಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.