
ಕೂಡ್ಲಿಗಿ: ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಉತ್ತೇಜನಕ್ಕೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.
ತಾಲ್ಲೂಕಿನ ಕಾನಹೊಸಹಳ್ಳಿಯ ಗ್ರಾಮ ಪಂಚಾಯ್ತಿ ಆವರಣದಲ್ಲಿ ಮಂಗಳವಾರ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯ್ತಿಯಿಂದ ಹಮ್ಮಿಕೊಂಡಿದ್ದ ಸಂಜೀವಿನ ಮಾಸಿಕ ಸಂತೆ, ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಿಮ್ಮ ಕೌಶಲ ಅಭಿವೃದ್ಧಿ ಬಗ್ಗೆ ವಿಶೇಷವಾದ ಗಮನವಿದೆ.
ನಿಮ್ಮ ಸ್ವಾಭಿಮಾನದ ದುಡಿಮೆ ನಿಮ್ಮ ಫಲವಾಗಲಿ. ಕ್ಷೇತ್ರದಲ್ಲಿ ನಮ್ಮ ಕಡೆಯಿಂದ ಒಂದಿಲ್ಲ ಒಂದು ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಅಂತಹ ಕಾರ್ಯಕ್ರಮಗಳಲ್ಲಿ ನಿಮ್ಮಿಂದ ತಯರಾದ ವಸ್ತಿಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಿಕೊಡಲಾವುದು. ಇದರಿಂದ ನಿಮ್ಮ ದುಡಿಮೆಯನ್ನು ಹೆಚ್ಚಿಸಿಕೊಳ್ಳಿ ಎಂದು ಹೇಳಿದರು.
ಸಹಾಯಕ ಆಯುಕ್ತ ವಿವೇಕಾನಂದ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೆ.ಜಿ. ಸಿದ್ದನಗೌಡ, ಉಪಾಧ್ಯಕ್ಷೆ ಲಕ್ಷ್ಮಿ, ತಹಶೀಲ್ದಾರ್ ವಿ.ಕೆ. ನೇತ್ರಾವತಿ, ತಾಲ್ಲೂಕು ಪಂಚಾಯ್ತಿ ಕಾರ್ಯಾನಿರ್ವಹಣಾಧಿಕರಿ ನರಸಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ವೆಂಕಟೇಶ್, ಮುಖಂಡರಾದ ಕೆ.ಎಂ. ಶಶಿಧರ ಸ್ವಾಮಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.