ADVERTISEMENT

ಸ್ವಚ್ಛತೆಗೆ ಹೆಚ್ಚಿನ ಆದ್ಯತೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2021, 15:07 IST
Last Updated 18 ನವೆಂಬರ್ 2021, 15:07 IST
ಸ್ವಚ್ಛ ಭಾರತ ಅಭಿಯಾನದಡಿ ಜಿಲ್ಲೆಯಲ್ಲಿ ಸಂಗ್ರಹಿಸಿದ್ದ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಜಿಂದಾಲ್‌ ಸಿಮೆಂಟ್‌ ಕಾರ್ಖಾನೆಗೆ ಹಸ್ತಾಂತರಿಸುವ ಕೆಲಸಕ್ಕೆ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಗುರುವಾರ ಹಸಿರು ನಿಶಾನೆ ತೋರಿದರು
ಸ್ವಚ್ಛ ಭಾರತ ಅಭಿಯಾನದಡಿ ಜಿಲ್ಲೆಯಲ್ಲಿ ಸಂಗ್ರಹಿಸಿದ್ದ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಜಿಂದಾಲ್‌ ಸಿಮೆಂಟ್‌ ಕಾರ್ಖಾನೆಗೆ ಹಸ್ತಾಂತರಿಸುವ ಕೆಲಸಕ್ಕೆ ಜಿಲ್ಲಾಧಿಕಾರಿ ಅನಿರುದ್ಧ್‌ ಪಿ. ಶ್ರವಣ್‌ ಗುರುವಾರ ಹಸಿರು ನಿಶಾನೆ ತೋರಿದರು   

ಹೊಸಪೇಟೆ(ವಿಜಯನಗರ): ‘ಜಿಲ್ಲೆಯ ನಗರ-ಪಟ್ಟಣಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣೆ ಕುರಿತು ಜನಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲ್ಲೂಕಿನ ಕಮಲಾಪುರದ ದರೋಜಿ ಪ್ರಕೃತಿ ನಿರೂಪಣಾ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ 8 ನಗರ ಸ್ಥಳೀಯ ಸಂಸ್ಥೆಗಳು ಬರುತ್ತವೆ. ಸಮರ್ಪಕ ಘನತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಒತ್ತು ಕೊಡಬೇಕು’ ಎಂದು ತಿಳಿಸಿದರು.

‘ಸಾರ್ವಜನಿಕರು ಮನೆಯಲ್ಲಿ ಹಸಿ ಕಸ-ಒಣ ಕಸ ಎಂದು ವಿಂಗಡಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ ನಗರ ಸ್ಥಳೀಯ ಸಂಸ್ಥೆಗಳ ಕಸ ಸಂಗ್ರಹಣಾ ವಾಹನಗಳಲ್ಲಿಯೇ ಹಾಕಬೇಕು, ಈ ಕುರಿತು ಅಗತ್ಯ ಪ್ರಚಾರ ಕೈಗೊಳ್ಳಬೇಕು’ ಎಂದರು.

ADVERTISEMENT

ಬೆಂಗಳೂರಿನ ವಾಸುಕಿ ಅಯ್ಯಂಗಾರ್‌, ಡಾ. ಶಾಂತಿ, ನಳಿನಿ ಶೇಖರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ನೀರು ಸರಬರಾಜು ಕಾರ್ಯನಿರ್ವಾಹಕ ಎಂಜನಿಯರ್ ಯೂನಿಸ್ ಖಾನ್ ಇದ್ದರು.

ಮ್ಯಾನುವಲ್ ಸ್ಕ್ಯಾವೆಂಜರ್ ಸಮೀಕ್ಷೆ:

‘ಡಿ.3ರಿಂದ 8ರ ವರೆಗೆ ಹೋಬಳಿ ಮಟ್ಟದಲ್ಲಿ ‘ಮ್ಯಾನುವಲ್ ಸ್ಕ್ಯಾವೆಂಜರ್’ ಸಮೀಕ್ಷೆಗೆ ಸಮೀಕ್ಷಾ ಕ್ಯಾಂಪ್‌ಗಳನ್ನು ಆಯೋಜಿಸಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.

‘ಅರ್ಹ ವ್ಯಕ್ತಿಗಳು ಸ್ವಯಂ ಘೋಷಿತ ಅರ್ಜಿಗಳನ್ನು ತಮ್ಮ ಗ್ರಾಮ ಪಂಚಾಯತಿಗಳಲ್ಲಿ ಪಡೆದು ತಮ್ಮ ವ್ಯಾಪ್ತಿಯ ಹೋಬಳಿ ಮಟ್ಟದ ಸಮೀಕ್ಷಾ ಕ್ಯಾಂಪಿನ ಕಚೇರಿ ಅಧಿಕಾರಿಗಳಿಗೆ ಸಲ್ಲಿಸಬಹುದು, ಮಾಹಿತಿಗೆ ನೋಡಲ್ ಅಧಿಕಾರಿ ಮತ್ತು ಉಪಕಾರ್ಯದರ್ಶಿಯನ್ನು ಸಂಪರ್ಕಿಸಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.