ADVERTISEMENT

ಸಂಸದ ರಾಘವೇಂದ್ರ ಹಂಪಿಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2018, 12:38 IST
Last Updated 8 ನವೆಂಬರ್ 2018, 12:38 IST
ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಅವರು ಗುರುವಾರ ಹಂಪಿ ವಿರೂಪಾಕ್ಷೇಶ್ವರ ದೇಗುಲಕ್ಕೆ ಭೇಟಿ ನೀಡಿದರು
ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಅವರು ಗುರುವಾರ ಹಂಪಿ ವಿರೂಪಾಕ್ಷೇಶ್ವರ ದೇಗುಲಕ್ಕೆ ಭೇಟಿ ನೀಡಿದರು   

ಹೊಸಪೇಟೆ: ಇತ್ತೀಚಿಗೆ ನಡೆದ ಶಿವಮೊಗ್ಗ ಲೋಕಸಭೆ ಉಪಚುನಾವಣೆಯಲ್ಲಿ ಜಯ ಗಳಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಗುರುವಾರ ತಾಲ್ಲೂಕಿನ ಹಂಪಿಗೆ ಭೇಟಿ ನೀಡಿದರು.

ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ಬಳಿಕ ಭುವನೇಶ್ವರಿ ದೇವಿ, ಪಂಪಾಂಬಿಕೆ ದೇವಿ ದರ್ಶನ ಪಡೆದರು. ನಂತರ ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆಯಲು ಮಂತ್ರಾಲಯಕ್ಕೆ ಪ್ರಯಾಣ ಬೆಳೆಸಿದರು.

ಬಿಜೆಪಿ ಮುಖಂಡರಾದ ಶೇಖರ್‌ ಹಂಪಿ, ಮಲ್ಲಿಕಾರ್ಜುನ, ವೀರೇಶ್ವರ ಸ್ವಾಮಿ, ರವಿಕುಮಾರ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.