ಬಳ್ಳಾರಿ: ‘ಕೃಷಿ ವಲಯದಲ್ಲಿ ಎಂಎಸ್‌ಎಂಇಗಳ ಉದ್ಯಮಶೀಲತೆ ಮತ್ತು ಕೌಶಲ್ಯ ಅಭಿವೃದ್ಧಿ ಪಾತ್ರ’ ಎಂಬ ವಿಷಯ ಆಧಾರಿತ ಒಂದು ದಿನದ ಕಾರ್ಯಗಾರವನ್ನು ಅಂತರರಾಷ್ಟ್ರೀಯ ಎಂಎಸ್‌ಎಂಇ ದಿನಾಚರಣೆ ನಿಮಿತ್ತ ಜೂನ್ 27ರಂದು ನಗರದ ಬಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಭಾರತೀಯ ಲೆಕ್ಕ ಪರಿಶೋಧಕ ಸಂಘದ ದಕ್ಷಿಣ ಭಾರತ ವಿಭಾಗದ ಮಾಜಿ ಅಧ್ಯಕ್ಷ ಸಿರಿಗೇರಿ ಪನ್ನರಾಜ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಯುವ ಸಮುದಾಯ ಉದ್ಯೋಗ ಅರಸಿ ಹೋಗುವ ಬದಲು ಸಣ್ಣ ಉದ್ದಿಮೆಗಳನ್ನು ಸ್ಥಾಪಿಸಿ, ಉದ್ಯೋಗಗಳನ್ನು ಸೃಷ್ಟಿಸಬೇಕು. ಈ ನಿಟ್ಟಿನಲ್ಲಿ ಕೃಷಿಕರಿಗೆ, ಉದ್ದಿಮೆದಾರರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ. ಸರ್ಕಾರದ ಸೌಲಭ್ಯಗಳು ಹಾಗೂ ಬ್ಯಾಂಕ್ ಸೌಲಭ್ಯಗಳನ್ನು ಮತ್ತು ತಂತ್ರಜ್ಞಾನದ ಸಲಹೆಗಳನ್ನು ಉಚಿತವಾಗಿ ನೀಡಲಾಗುವುದು. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು’ ಎಂದರು.
ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮಂತಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಗ್ರಾಮಿಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ಎಂ.ಬಂಡಿವಾಡ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಭಾರತೀಯ ಲೆಕ್ಕ ಪರಿಶೋಧಕ ಸಂಘದ ಬಳ್ಳಾರಿ ಶಾಖೆಯ ಅಧ್ಯಕ್ಷ ಗಜರಾಜ್ ಡಿ, ಕಾರ್ಯದರ್ಶಿ ವಿ.ವಿಶ್ವನಾಥ್ ಅಚಾರಿ, ಉಪಾಧ್ಯಕ್ಷ ಕೆ.ಎಂ.ಪುರುಷೋತ್ತಮ ರೆಡ್ಡಿ, ಕೆ.ವಿ.ಸ್ವಪ್ನ ಪ್ರೀಯ, ಶರಣ ಪಾಟೀಲ್, ಜಿತೇಂದ್ರ ಸೇರಿದಂತೆ ಹಲವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.