ADVERTISEMENT

ಬಳ್ಳಾರಿ: ಎಂಎಸ್‌ಪಿ ಅಡಿ ಬಿಳಿ ಜೋಳ ಖರೀದಿ

​ಪ್ರಜಾವಾಣಿ ವಾರ್ತೆ
Published 16 ಜನವರಿ 2026, 4:40 IST
Last Updated 16 ಜನವರಿ 2026, 4:40 IST
ಬಿಳಿ ಜೋಳ
ಬಿಳಿ ಜೋಳ   

ಬಳ್ಳಾರಿ: ‘2025-26ನೇ ಸಾಲಿನ ಮುಂಗಾರು ಋತುವಿನ ಬಿಳಿ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲಾಗುವುದು’ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

‘ಜೋಳವನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನಂತರ ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ, ತಾಲ್ಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ತಾಲ್ಲೂಕು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಜೋಳ ಮಾರಾಟ ಮಾಡಲು ನೋಂದಾಯಿಸಿಕೊಳ್ಳಬೇಕು’ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ 2025-26ನೇ ಸಾಲಿನ ಮುಂಗಾರು ಋತುವಿನ ಬಿಳಿಜೋಳ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.

ADVERTISEMENT

ಬಿಳಿ ಜೋಳ-ಹೈಬ್ರೀಡ್: ₹3,699 (ಪ್ರತಿ ಕ್ವಿಂಟಲ್‌ಗೆ), ಮಾಲ್ದಂಡಿ: ₹3,749 ನಿಗದಿ ಮಾಡಲಾಗಿದೆ. 

ಖರೀದಿ ಕೇಂದ್ರಗಳ ವಿವರ: ಬಳ್ಳಾರಿ ತಾಲ್ಲೂಕಿನ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ಬಳ್ಳಾರಿ ಮತ್ತು ಮೋಕಾ, ಅಸುಂಡಿ, ರೂಪನಗುಡಿ, ಅಮರಾಪುರ ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ  ಸಂಘ, ಕುರುಗೋಡು ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಿರುಗುಪ್ಪ ತಾಲ್ಲೂಕಿನ ಕೆ.ಬೆಳಗಲ್ಲು, ಕರೂರು, ಹಚ್ಚೋಳ್ಳಿ, ಬೂದುಗುಪ್ಪ, ಬಿ.ಎಂ.ಸೂಗೂರು, ತಾಳೂರು, ಮುದ್ದಟನೂರು, ಅರಳಿಗನೂರು, ಸಿರಿಗೇರಿ ಗ್ರಾಮಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ  ಸಂಘ, ಕಂಪ್ಲಿ ತಾಲ್ಲೂಕಿನ ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ಕಂಪ್ಲಿ ಮತ್ತು ಎಮ್ಮಿಗನೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ  ಸಂಘಗಳಲ್ಲಿ ಖರೀದಿ ಕೇಂದ್ರ ತೆರಯಲಾಗುತ್ತಿದೆ. 

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.