ಕೆ.ಎಸ್. ಈಶ್ವರಪ್ಪ
ಬಳ್ಳಾರಿ: ‘ನನ್ನ ಜೀವ ಇರುವುದೇ ಬಿಜೆಪಿಯಲ್ಲಿ’ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಬಿಟ್ಟು ನಾನೆಲ್ಲಿಗೆ ಹೋಗಲಿ? ಪಕ್ಷದ ಕೆಲವು ಹಿರಿಯರು ನನ್ನೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ’ ಎಂದರು.
‘ಕೆಲ ಕಾಂಗ್ರೆಸ್ ಮುಖಂಡರು, ಸಚಿವರು ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದರು. ನನಗೂ ಹಾಗೂ ನನ್ನ ಪುತ್ರನಿಗೆ ಸೂಕ್ತ ಸ್ಥಾನಮಾನ ನೀಡುವುದಾಗಿಯೂ ಹೇಳಿದ್ದರು. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಸಹ ಆಹ್ವಾನ ನೀಡಿದ್ದರು. ನನ್ನದು ಹಿಂದುತ್ವವಾದ. ಬೇರೆ ಪಕ್ಷಗಳಿಗೆ ಹೇಗೆ ಹೋಗಲಿ? ಎಂದರು.
‘ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದು ಮುಗಿಯಿತು. ರಾಜ್ಯದಲ್ಲಿ ಈಗ ಬಿಜೆಪಿ ಬಲ ಕೊಂಚ ಕುಸಿದಿದೆ. ಪಕ್ಷವನ್ನು ಬಲಿಷ್ಠವಾಗಿ ಕಟ್ಟಬೇಕಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.