ಮಹಿಳೆ ಸಾವು
(ಪ್ರಾತಿನಿಧಿಕ ಚಿತ್ರ)
ಹೂವಿನಹಡಗಲಿ : ತಾಲ್ಲೂಕಿನ ಮೈಲಾರ ಸುಕ್ಷೇತ್ರದಲ್ಲಿ ಸೋಮವಾರ ಆಗಿ ಹುಣ್ಣಿಮೆ ಆಚರಣೆಗೆ ಬಂದಿದ್ದ ಭಕ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕು ಕೊಂಚಿಗೇರಿ ಬೂದಿಹಾಳ ಗ್ರಾಮದ ರಾಮಣ್ಣ ಯಲ್ಲಪ್ಪ ಚಳಗೇರಿ (79) ಮೃತರು. ಮೈಲಾರಲಿಂಗೇಶ್ವರ ಗಂಗಿಮಾಳಮ್ಮ ಕಲ್ಯಾಣ ಮಹೋತ್ಸವ ಹಾಗೂ ರಥೋತ್ಸವದಲ್ಲಿ ಭಾಗವಹಿಸಲು ಅವರು ಸುಕ್ಷೇತ್ರಕ್ಕೆ ಬಂದಿದ್ದರು. ದೇವಸ್ಥಾನ ಆವರಣದಲ್ಲಿ ಕುಸಿದು ಬಿದ್ದು, ತೀವ್ರ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಿರೇಹಡಗಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.