ಹೂವಿನಹಡಗಲಿ: ತಾಲ್ಲೂಕಿನ ಮೈಲಾರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶನಿವಾರ ಸ್ವಚ್ಛತಾ ಕಾರ್ಯ ನಡೆಯಿತು.
ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ ಶೆಟ್ಟಿ ಮಾತನಾಡಿ, ‘ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸೂಚನೆಯಂತೆ ನಾಡಿನ ದೇವಾಲಯ, ಧಾರ್ಮಿಕ ಕ್ಷೇತ್ರಗಳಲ್ಲಿ ಎರಡು ಬಾರಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಆಗಸ್ಟ್ 15ರೊಳಗೆ ತಾಲ್ಲೂಕಿನ ದೇವಾಲಯಗಳನ್ನು ಸ್ವಚ್ಛಗೊಳಿಸುತ್ತೇವೆ’ ಎಂದು ತಿಳಿಸಿದರು.
ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಮಾತನಾಡಿದರು. ಯೋಜನಾಧಿಕಾರಿಗಳಾದ ತಿಲಕ್ ರಾಜ್, ರವೀಂದ್ರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.