ADVERTISEMENT

ಶ್ರದ್ಧಾ, ಭಕ್ತಿಯಿಂದ ನಾಗರ ಪಂಚಮಿ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 11:31 IST
Last Updated 12 ಆಗಸ್ಟ್ 2021, 11:31 IST
ನಾಗರಪಂಚಮಿ ನಿಮಿತ್ತ ಹೊಸಪೇಟೆಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಭಕ್ತರು ನಾಗದೇವತೆ ಮೂರ್ತಿಗೆ ಪೂಜೆ ಸಲ್ಲಿಸಿ, ಆರತಿ ಬೆಳಗಿದರು
ನಾಗರಪಂಚಮಿ ನಿಮಿತ್ತ ಹೊಸಪೇಟೆಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಭಕ್ತರು ನಾಗದೇವತೆ ಮೂರ್ತಿಗೆ ಪೂಜೆ ಸಲ್ಲಿಸಿ, ಆರತಿ ಬೆಳಗಿದರು   

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಗುರುವಾರ ಶ್ರದ್ಧಾ, ಭಕ್ತಿಯಿಂದ ನಾಗರಪಂಚಮಿ ಆಚರಿಸಲಾಯಿತು.

ನಗರದ ಮಾರ್ಕಂಡೇಶ್ವರ ದೇವಸ್ಥಾನ, ವೇಣುಗೋಪಾಲ ದೇವಸ್ಥಾನ, ನಾಗಪ್ಪನ ಕಟ್ಟೆ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ತೆರಳಿ, ನಾಗರಹಾವಿನ ಕೆತ್ತನೆಗೆ ಪೂಜೆ ಸಲ್ಲಿಸಿ, ಹಾಲೆರೆದರು.

ತಾಲ್ಲೂಕಿನ ಬುಕ್ಕಸಾಗರದ ಏಳು ಹೆಡೆ ನಾಗಪ್ಪ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು. ಬೆಳಿಗ್ಗೆಯಿಂದಲೇ ವಿವಿಧ ಕಡೆಗಳಿಂದ ಭಕ್ತರು ಬಂದು ದೇವರ ದರ್ಶನ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.