ಬಳ್ಳಾರಿ: ಬಳ್ಳಾರಿ ಜಿಲ್ಲಾಧಿಕಾರಿಯಾಗಿ 2015ರ ಬ್ಯಾಚ್‌ನ ಐಎಎಸ್ ಅಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರನ್ನು ಸರ್ಕಾರ ಮಂಗಳವಾರ ನೇಮಿಸಿದೆ.
ಈ ಹಿಂದಿನ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಸ್ಥಳ ನಿಯೋಜನೆ ಮಾಡಿಲ್ಲ.
ನಾಗೇಂದ್ರ ಪ್ರಸಾದ್ ಅವರು ಈ ಹಿಂದೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಮತ್ತು ಮತ್ತು ಪದನಿಮಿತ್ತ ಜಂಟಿ ಕಾರ್ಯದರ್ಶಿಯಾಗಿದ್ದರು.
ಜಿಲ್ಲೆಯ ಕೆಲ ಜನಪ್ರತಿನಿಧಿಗಳೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾಯಿಸಲು ಭಾರೀ ಒತ್ತಡ ಇತ್ತು. ಇದೆಲ್ಲದರ ಮಧ್ಯೆಯೂ ಅವರು ಎರಡು ವರ್ಷಗಳಿಗೂ ಅಧಿಕ ಕಾಲ ಇಲ್ಲಿ ಉಳಿದುಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.