ಹೊಸಪೇಟೆ: ಪಕ್ಷದಲ್ಲಿ ಅಸಮಾಧಾನಿತರು ಯಾರೂ ಇಲ್ಲ. ಯಾರು ಅಸಮಾಧಾನಗೊಂಡಿದ್ದರೋ ಅವರೊಂದಿಗೆ ನಾನೇ ಖುದ್ದು ಮಾತನಾಡಿ ಸಮಾಧಾನ ಪಡಿಸಿರುವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಭಾನುವಾರ ಇಲ್ಲಿ ಆಯೋಜಿಸಿರುವ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರೆಸಾರ್ಟ್‌ಗೆ ಹೋದರೆ ತಪ್ಪೇನೂ. ನಾನು ಹೋಗುತ್ತೇನೆ. ನಾನು ನಿನ್ನೆ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದೆ. ಇಂದು ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿರುವೆ. ಯಾರು, ಎಲ್ಲಿ ಉಳಿದುಕೊಂಡರೆ ಏನು. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪದೇ ಪದೇ ಮುಖ್ಯಮಂತ್ರಿ ವಿರುದ್ಧ ಹೇಳಿಕೆ ನೀಡುತ್ತಿರುವುದಕ್ಕೆ ಸಂಬಂಧಿಸಿದಂತೆ ಪಕ್ಷದ ಶಿಸ್ತು ಸಮಿತಿ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಆದರೆ, ಕಾಂಗ್ರೆಸ್ ನವರು ಸದಸ್ಯರಿಗೆ ಆಮಿಷವೊಡ್ಡಿ ಅವರ ಪಕ್ಷದತ್ತ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.