ADVERTISEMENT

‘ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ’

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 5:25 IST
Last Updated 20 ಸೆಪ್ಟೆಂಬರ್ 2019, 5:25 IST
ಸಭೆ ಉದ್ದೇಶಿಸಿ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಮಾತನಾಡಿದರು. ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್‌ ಇದ್ದಾರೆ
ಸಭೆ ಉದ್ದೇಶಿಸಿ ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಮಾತನಾಡಿದರು. ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್‌ ಇದ್ದಾರೆ   

ಹೊಸಪೇಟೆ: ’ಬರುವ 2020ರ ಜನವರಿ ಒಂದಕ್ಕೆ 18 ವರ್ಷ ವಯಸ್ಸು ತುಂಬಿದವರುಮತದಾರ ಪಟ್ಟಿಯಲ್ಲಿ ಹೆಸರು ಸೇರಿಸಬಹುದು‘ ಎಂದು ಉಪವಿಭಾಗಾಧಿಕಾರಿ ಪಿ.ಎನ್‌. ಲೋಕೇಶ್‌ ತಿಳಿಸಿದರು.

ಗುರುವಾರ ನಗರದ ತಾಲ್ಲೂಕು ಕಚೇರಿಯಲ್ಲಿ ನಡೆದ ಮತದಾರರ ನೋಂದಣಿ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಬಿ.ಎಲ್‌.ಒ., ಕಾಲೇಜಿನ ಪ್ರಾಚಾರ್ಯರಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ಚುನಾವಣಾ ಆಯೋಗವುnational voters system portal ಮಾಡಿದ್ದು, ಅದರ ಮೂಲಕ ಮತದಾರರು ನೇರವಾಗಿ ಹೆಸರು ಸೇರಿಸಬಹುದು. ಅಷ್ಟೇ ಅಲ್ಲ,ಹೆಸರು, ಜನ್ಮ ದಿನಾಂಕ, ವಿಳಾಸ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರತಿಯೊಬ್ಬರೂ ಅದರ ಪ್ರಯೋಜನ ಪಡೆದುಕೊಳ್ಳಬಹುದು‘ ಎಂದು ತಿಳಿಸಿದರು.

ADVERTISEMENT

’ವೆಬ್‌ಸೈಟಿನಲ್ಲಿ ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರಿಸಲು ಅರ್ಜಿ ಹಾಕಿದರೆ, ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತಾರೆ.ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಪ್ರಕ್ರಿಯೆ ಸೆ. 1ರಿಂದಲೇ ಆರಂಭಗೊಂಡಿದೆ. ಈ ತಿಂಗಳ ಅಂತ್ಯದ ವರೆಗೆ ನಡೆಯಲಿದ್ದು, ಅದರ ಪ್ರಯೋಜನ ಪಡೆದುಕೊಳ್ಳಬೇಕು‘ ಎಂದು ತಿಳಿಸಿದರು.

ತಹಶೀಲ್ದಾರ್‌ ಎಚ್‌. ವಿಶ್ವನಾಥ್‌,ಚುನಾವಣೆ ಸಿಬ್ಬಂದಿ ರಮೇಶ, ಪಂಪಾಪತಿ, ಸಿ.ಎಸ್‍.ಸಿ. ಜಿಲ್ಲಾ ವ್ಯವಸ್ಥಾಪಕ ಲಕ್ಷ್ಮಣ್ ರಾವ್, ಕಾಕುಬಾಳು ಸುರೇಶ್, ಜಗದೀಶ, ಮಂಜುನಾಥ, ಯು. ಭೀಮರಾಜ, ಇಮಾಮ್ ಕಾಸೀಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.