ADVERTISEMENT

‘ರಾಷ್ಟ್ರೀಯ ಹೆದ್ದಾರಿ ಸಹಾಯಕರ ಸೇವೆ ಶ್ಲಾಘನೀಯ’

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 15:33 IST
Last Updated 18 ಜೂನ್ 2025, 15:33 IST
ವಿಜಯನಗರ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಕೂಡ್ಲಿಗಿ ಉಪ ವಿಭಾಗದಿಂದ ಬುಧವಾರ ಕೂಡ್ಲಿಗಿ ಪಟ್ಟಣದ ಮದಕರಿ ವೃತ್ತದಲ್ಲಿ ಬೈಕ್ ಸವಾರರಿಗೆ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಜಿಲ್ಲ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್ ಹಾಗೂ ತಹಶೀಲ್ದಾರ್ ವಿ.ಕೆ. ನೇತ್ರಾವತಿ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಹಾಜರಿದ್ದರು
ವಿಜಯನಗರ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಕೂಡ್ಲಿಗಿ ಉಪ ವಿಭಾಗದಿಂದ ಬುಧವಾರ ಕೂಡ್ಲಿಗಿ ಪಟ್ಟಣದ ಮದಕರಿ ವೃತ್ತದಲ್ಲಿ ಬೈಕ್ ಸವಾರರಿಗೆ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಜಿಲ್ಲ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್ ಹಾಗೂ ತಹಶೀಲ್ದಾರ್ ವಿ.ಕೆ. ನೇತ್ರಾವತಿ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಹಾಜರಿದ್ದರು   

ಕೂಡ್ಲಿಗಿ: ಹೆದ್ದಾರಿಯಲ್ಲಿ ನಡೆಯುವ ಅಪಘಾತಗಳಲ್ಲಿ ಗಾಯಗೊಂಡವರಿಗೆ ಯಾವುದೇ ಫಲಾಪೇಕ್ಷೆ ಇಲ್ಲದೆ ಹೆದ್ದಾರಿ ಸಹಾಯಕರು ಹಾಗೂ ಅಂಬುಲೆನ್ಸ್ ಚಾಲಕರು ಸೇವೆ ಮಾಡುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ಹೆದ್ದಾರಿ ಸುರಕ್ಷತಾ ಆರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮೂರು ವರ್ಷಗಳಲ್ಲಿ ರಾಷ್ಟೀಯ ಹೆದ್ದಾರಿ-50ರಲ್ಲಿ ಶೇ 17ರಷ್ಟು ಅಪಘಾತಗಳು ಕಡಿಮೆಯಾಗಿವೆ. ಅಪಘಾತಗಳು ಆಕಸ್ಮಿಕವಾಗಿ ನಡೆಯುತ್ತವೆ. ಆದರೆ, ಹೆದ್ದಾರಿಯಲ್ಲಿನ ಸಹಾಯಕರ ನೆರವಿನಿಂದ ಅಪಘಾತಗಳಲ್ಲಿ ಗಾಯಗೊಂಡ ಅನೇಕರು ಬದುಕಿಳಿದಿದ್ದಾರೆ. ಪೊಲೀಸ್ ಹಾಗೂ ಆರೋಗ್ಯ ಇಲಾಖೆಗ ಸದಾ ಸಹಯ ಹಸ್ತ ಚಾಚುವ ಮೂಲಕ ಹೆದ್ದಾರಿ ಸಹಾಯಕರು ನಿಸ್ವಾರ್ಥವಾಗಿ ಕೆಲಸ ಮಾಡುತಿದ್ದಾರೆ. ಎಲ್ಲಿಯೇ ಅಪಘಾತ ನಡೆದ ತಕ್ಷಣ ವ್ಯಾಟ್ಸಾಪ್ ಗುಂಪಲ್ಲಿ ಮಾಹಿತಿ ಹಾಕಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಮೂಲಕ ಅವರ ಜೀವ ಉಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ADVERTISEMENT

ಸಾರ್ವಜನಿಕ ಆಸ್ಪತ್ರೆಯ ಮೂಳೆ ತಜ್ಞ ಡಾ. ರವಿಕುಮಾರ್ ಮಾತನಾಡಿ, ಅಪಘಾತ ನಡೆದ ಸಂದರ್ಭದಲ್ಲಿ ಗಾಯಾಳುಗಳು ಪರಿಸ್ಥಿತಿ ಅರ್ಥ ಮಾಡಿಕೊಂಡು ಅವರ ನೆರವಿಗೆ ಧಾವಿಸಬೇಕು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಾಗ ಅತ್ಯಂತ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ನಾವು ಮಾಡುವ ಅತುರದ ಕೆಲಸ ಅವರ ಪ್ರಾಣಕ್ಕೆ ಅಪಾಯ ಎದುರಾಗಬಹುದು. ಅವರಿಗೆ ಯಾವುದೇ ಕಾರಣಕ್ಕೂ ನೀರು ಹಾಗೂ ಆಹಾರ ನೀಡಬಾರದು ಎಂದು ಸಲಹೆ ನೀಡಿದರು.

ಹೆಲ್ಮೆಟ್ ಜಾಗೃತಿ: ಪಟ್ಟಣದ ಮದಕರಿ ವೃತ್ತದಲ್ಲಿ ಪೊಲೀಸ್ ಇಲಾಖೆಯಿಂದ ಬೈಕ್ ಸವಾರರಿಗೆ ಹೆಲ್ಮೆಟ್ ಹಾಕಿಸುವ ಮೂಲಕ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ಮಾತನಾಡಿ, ಪ್ರತಿಯೊಬ್ಬ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇದರಿಂದ ನಿಮ್ಮ ಜೀವ ಉಳಿಯುವುದಲ್ಲದೇ, ದಂಡದಿಂದಲೂ ತಪ್ಪಿಸಿಕೊಳ್ಳಬಹುದು ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಕವಲ್ಲಿ ಶಿವಪ್ಪ ನಾಯಕ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ತಾಲ್ಲುಕು ಆರೋಗ್ಯಾಧಿಕಾರಿ ಡಾ.ಎಸ್.ಪಿ. ಪ್ರದೀಪ್, ಸಿಪಿಐಗಳಾದ ಪ್ರಲ್ಹಾದ್ ಆರ್. ಚನ್ನಗಿರಿ, ವಿಕಾಸ್ ಲಮಾಣಿ, ವೆಂಕಟಸ್ವಾಮಿ ಹಾಗೂ ಕೂಡ್ಲಿಗಿ ಉಪ ವಿಭಾಗದ ಪಿಎಸ್‌ಐ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.