ADVERTISEMENT

ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಸ್ತಬ್ಧ

​ಪ್ರಜಾವಾಣಿ ವಾರ್ತೆ
Published 10 ಜೂನ್ 2019, 12:36 IST
Last Updated 10 ಜೂನ್ 2019, 12:36 IST
ಬಂದ್‌ನಿಂದ ಹೊಸಪೇಟೆ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು–ಪ್ರಜಾವಾಣಿ ಚಿತ್ರ
ಬಂದ್‌ನಿಂದ ಹೊಸಪೇಟೆ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕವು ಸೋಮವಾರ ಕರೆ ನೀಡಿದ್ದ ರಾಷ್ಟ್ರೀಯ ಹೆದ್ದಾರಿ ಬಂದ್‌ ಯಶಸ್ವಿಯಾಯಿತು.

ನಗರ ಹೊರವಲಯದ ತುಂಗಭದ್ರಾ ಜಲಾಶಯ ಎದುರಿನ ರಾಷ್ಟ್ರೀಯ ಹೆದ್ದಾರಿ 50ರ ಮೇಲೆ ಧರಣಿ ನಡೆಸಿ, ಬಂದ್‌ ಮಾಡಿದರು. ಬೆಳಿಗ್ಗೆ ಆರರಿಂದ ಸಂಜೆ ನಾಲ್ಕು ಗಂಟೆಯ ವರೆಗೆ, ಸತತ ಆರು ಗಂಟೆ ಬಂದ್‌ ಆಚರಿಸಿದರು.

ಬಂದ್‌ನಿಂದ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಪುಣೆ, ಮುಂಬೈ ಸೇರಿದಂತೆ ವಿವಿಧ ಭಾಗಗಳಿಗೆ ಹೋಗಬೇಕಿದ್ದ ವಾಹನಗಳು ರಸ್ತೆಬದಿ ಸಾಲುಗಟ್ಟಿ ನಿಂತಿದ್ದವು. ಜನ ವಾಹನಗಳಲ್ಲಿಯೇ ಕಾಲ ಕಳೆದು ಸುಸ್ತು ಹೊಡೆದರು. ದೈನಂದಿನ ಕೆಲಸಗಳಿಗೆ ಹೋಗುವವರು ರಸ್ತೆಬದಿಯಲ್ಲಿಯೇ ವಾಹನಗಳನ್ನು ನಿಲ್ಲಿಸಿ, ಕಾಲ್ನಡಿಗೆಯಲ್ಲಿ ತೆರಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.