ಗಂಗಾವತಿ: ತಾಲ್ಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ರಾಷ್ಟ್ರೀಯ ಕುಸ್ತಿಪಟು ಹರಿಯಾಣದ ಜಿತೇಂದ್ರಕುಮಾರ್ ಭಾನುವಾರ ಭೇಟಿ ನೀಡಿ ಆಂಜನೇಯಸ್ವಾಮಿಯ ದರ್ಶನ ಪಡೆದರು.
ಈ ವೇಳೆ ಪ್ರಜಾವಾಣಿಯೊಂದಿಗೆ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಅಂಜನಾದ್ರಿಗೆ ಭೇಟಿ ನೀಡುತ್ತಿದ್ದೇನೆ. ಅಂಜನಾದ್ರಿಯ ಬಗ್ಗೆ ಸ್ಥಳೀಯರೊಬ್ಬರು ಮಾಹಿತಿ ನೀಡಿದ ಹಿನ್ನೆಲೆ, ದರ್ಶನ ಪಡೆಯಲು ಬಂದಿದ್ದೇನೆ. ಅಂಜನಾದ್ರಿ ಸ್ಥಳ ತುಂಬಾ ಚೆನ್ನಾಗಿದೆ.
ಬಳ್ಳಾರಿಯ ಜೆಎಸ್ ಡಬ್ಲ್ಯೂ ತರಬೇತಿ ಕೇಂದ್ರದಲ್ಲಿ ಕಳೆದ ಎರಡು ತಿಂಗಳಿಂದ ತರಬೇತಿ ಪಡೆಯುತ್ತಿದ್ದೇನೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.