ಕಂಪ್ಲಿ: ಸ್ಥಳೀಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಪ್ರಸಕ್ತ ಸಾಲಿನ ಜವಾಹರ್ ನವೋದಯ ಪ್ರವೇಶ ಪರೀಕ್ಷೆಗೆ 307 ವಿದ್ಯಾರ್ಥಿಗಳು ಹಾಜರಾಗಿದ್ದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ಶ್ರೀಕುಮಾರ್ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
‘343 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 36 ವಿದ್ಯಾರ್ಥಿಗಳು ಗೈರಾಗಿದ್ದಾರೆ’ ಎಂದು ಪರೀಕ್ಷೆ ಮುಖ್ಯ ಅಧೀಕ್ಷಕ ಬಸವರಾಜ ಪಾಟೀಲ್ ತಿಳಿಸಿದ್ದಾರೆ. ಕೇಂದ್ರದ ವೀಕ್ಷಕ(ಸಿಎಲ್‍ಒ) ಚಂದನ್ ಸೇರಿದಂತೆ 17 ಮಂದಿ ಪರೀಕ್ಷೆ ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.