ADVERTISEMENT

‘ಭ್ರಷ್ಟಾಚಾರ ವಿರುದ್ಧದ ಸಮರಕ್ಕೆ ಕೈಜೋಡಿಸಿ’

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2018, 12:24 IST
Last Updated 5 ಡಿಸೆಂಬರ್ 2018, 12:24 IST
ಹೊಸಪೇಟೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎ.ಸಿ.ಬಿ. ಪಿ.ಎಸ್‌.ಐ. ಶ್ರೀಧರ ದೊಡ್ಡಿ ಮಾತನಾಡಿದರು–ಪ್ರಜಾವಾಣಿ ಚಿತ್ರ
ಹೊಸಪೇಟೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎ.ಸಿ.ಬಿ. ಪಿ.ಎಸ್‌.ಐ. ಶ್ರೀಧರ ದೊಡ್ಡಿ ಮಾತನಾಡಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ‘ಯಾವುದೋ ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯಿಂದ ಭ್ರಷ್ಟಾಚಾರ ತಡೆಯಲು ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎ.ಸಿ.ಬಿ.) ಕೆಲಸ ಮಾಡುತ್ತಿದ್ದು, ಈ ಸಮರಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದು ಎ.ಸಿ.ಬಿ. ಪಿ.ಎಸ್‌.ಐ. ಶ್ರೀಧರ ದೊಡ್ಡಿ ಮನವಿ ಮಾಡಿದರು.

ಇಲ್ಲಿನ ಪ್ರೌಢದೇವರಾಯ ತಾಂತ್ರಿಕ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಕೆಲವರು ಅಧಿಕಾರ ದುರ್ಬಳಕೆ, ಲಂಚ ಸ್ವೀಕರಿಸಿ ಭ್ರಷ್ಟಾಚಾರದಲ್ಲಿ ತೊಡಗಿರುತ್ತಾರೆ. ಇಂತಹ ಘಟನೆಗಳು ಗಮನಕ್ಕೆ ಬಂದರೆ ಎ.ಸಿ.ಬಿ. ಗಮನಕ್ಕೆ ತರಬೇಕು. ಅಂತಹವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.

‘ಭ್ರಷ್ಟಾಚಾರಿಗಳ ಬಗ್ಗೆ ಮಾಹಿತಿ ಕೊಟ್ಟವರ ಹೆಸರನ್ನು ಯಾವುದೇ ಕಾರಣಕ್ಕೂ ಬಹಿರಂಗ ಪಡಿಸುವುದಿಲ್ಲ. ಸಮಾಜದ ಸ್ವಾಸ್ಥ್ಯ ಕಾಪಾಡುವುದು ಎಲ್ಲರ ಜವಾಬ್ದಾರಿ. ಪ್ರತಿಯೊಬ್ಬರೂ ಅವರ ಕರ್ತವ್ಯ ಅರಿತುಕೊಂಡು ಕೆಲಸ ಮಾಡಬೇಕು’ ಎಂದರು.

ADVERTISEMENT

ಕಾಲೇಜಿನ ಪ್ರಾಚಾರ್ಯ ಎಸ್‌.ಎಂ. ಶಶಿಧರ ಮಾತನಾಡಿ, ‘ದೇಶದ ಅಭಿವೃದ್ಧಿಗೆ ಭ್ರಷ್ಟಾಚಾರ ಮಾರಕವಾಗಿದೆ. ಅದನ್ನು ತೊಲಗಿಸಲು ಎಲ್ಲರೂ ಪಣ ತೊಡಬೇಕು’ ಎಂದು ಹೇಳಿದರು.

ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಪ್ರಾಧ್ಯಾಪಕ ಎಚ್.ಜೆ.ಗೋಪಾಲಕೃಷ್ಣ, ಕಂದಾಯ ಇಲಾಖೆ ಶಿರಸ್ತೇದಾರ್ ಶ್ರೀಪಾದ ದೀಕ್ಷಿತ್, ಕಾಲೇಜಿನ ಪ್ರಾಧ್ಯಾಪಕ ಹುಡೇಂ ಕೆ.ಆರ್.ಗಿರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.