ADVERTISEMENT

ಸಾರಿಗೆ ಸಂಸ್ಥೆ ನಿವೃತ್ತ ನೌಕರರಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2019, 10:30 IST
Last Updated 12 ಸೆಪ್ಟೆಂಬರ್ 2019, 10:30 IST
ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿವೃತ್ತ ನೌಕರರು ಗುರುವಾರ ಹೊಸಪೇಟೆಯ ಕೇಂದ್ರ ಬಸ್‌ ನಿಲ್ದಾಣದಲ್ಲಿನ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು–ಪ್ರಜಾವಾಣಿ ಚಿತ್ರ
ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿವೃತ್ತ ನೌಕರರು ಗುರುವಾರ ಹೊಸಪೇಟೆಯ ಕೇಂದ್ರ ಬಸ್‌ ನಿಲ್ದಾಣದಲ್ಲಿನ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಉಪಧನ ನೀಡುವಂತೆ ಒತ್ತಾಯಿಸಿ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ನಿವೃತ್ತ ನೌಕರರು ಗುರುವಾರ ನಗರದ ಉಪವಿಭಾಗ ಕಚೇರಿ ಎದುರು ಧರಣಿ ನಡೆಸಿದರು.

ನಂತರ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಸೀನಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು.

‘ಸಂಸ್ಥೆಯ ಮೇಲಧಿಕಾರಿಗಳು ನಿವೃತ್ತ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ವಿಫಲರಾಗಿದ್ದಾರೆ. ಅದನ್ನು ಖಂಡಿಸಿ ಈ ಧರಣಿ ನಡೆಸಲಾಗುತ್ತಿದೆ. ಉಪಧನ ನೀಡಬೇಕೆಂದು ಹಲವು ಸಲ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎ.ಜಿ. ಧರ್ಮರಾಜ ಆರೋಪಿಸಿದರು.‘

ADVERTISEMENT

‘ವಿಭಾಗದ ವ್ಯವಸ್ಥಾಪಕ ನಿರ್ದೇಶಕರ ಆದೇಶದಂತೆ ಬದಲಿ, ಬ್ರೇಕ್‌ ಆಫ್‌ ವ್ಯವಸ್ಥೆ ಜಾರಿಗೆ ತರಬೇಕು. ಅದಕ್ಕೆ ಪ್ರತ್ಯೇಕವಾಗಿ ಉಪಧನ ನೀಡಬೇಕು. ಉಪಧನ ನೀಡುವಾಗ ಲಿಖಿತ ರೂಪದಲ್ಲಿ ಬರೆಸಿಕೊಳ್ಳಬಾರದು. ನಿವೃತ್ತ ನೌಕರರೊಂದಿಗೆ ಮೇಲಧಿಕಾರಿಗಳು ಉತ್ತಮ ರೀತಿಯಲ್ಲಿ ವ್ಯವಹರಿಸಬೇಕು’ ಎಂದು ಒತ್ತಾಯಿಸಿದರು.

ಸಂಘದಕಾರ್ಯಾಧ್ಯಕ್ಷ ಈರಣ್ಣ, ರಾಜಶೇಖರ್‌, ಪಂಪಾಪತಿ, ಸತ್ಯನಾರಾಯಣ, ಗೋಣಿಬಸಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.