ADVERTISEMENT

ಯುವಜನತೆ ದಂಗೆ ಏಳುವ ಆತಂಕವಿದೆ: ನಿಖಿಲ್ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 22:03 IST
Last Updated 1 ಮಾರ್ಚ್ 2026, 22:03 IST
ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ   

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ‘ಧಾರವಾಡದಲ್ಲಿ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ನೋಡಿದರೆ, ನೇಪಾಳದಲ್ಲಿ ನಡೆದಂತೆ ಮುಂದೆ ಇಲ್ಲಿಯೂ ಯುವಜನತೆ ದಂಗೆ ಏಳುವ ಆತಂಕವಿದೆ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೇಮಕಾತಿ ಪ್ರಕ್ರಿಯೆಯಲ್ಲಿನ ಅನೇಕ ಲೋಪಗಳನ್ನು ಸರಿಪಡಿಸಬೇಕಿದೆ’ ಎಂದರು.  

‘ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷ ಸಿದ್ಧವಾಗುತ್ತಿದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಕೆಲಸ ಮಾಡಿರುವ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡಲಾಗುವುದು’ ಎಂದು ತಿಳಿಸಿದರು

ADVERTISEMENT