ADVERTISEMENT

ನಾಳೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಬಳ್ಳಾರಿ ಭೇಟಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 6:28 IST
Last Updated 15 ಅಕ್ಟೋಬರ್ 2025, 6:28 IST
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌    

ಬಳ್ಳಾರಿ: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅಕ್ಟೋಬರ್ 16 ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.

ಮಧ್ಯಾಹ್ನ 1.45 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಭೇಟಿ ನೀಡುವರು.

ಬಳಿಕ ಮಧ್ಯಾಹ್ನ 3 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಕೊಂಚಿಗೇರಿ ಗ್ರಾಮದಲ್ಲಿ ಸಂಸದೀಯ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ ರೈತರಿಗೆ ಸ್ಥಳೀಯ ಕೃಷಿ ತರಬೇತಿ ಕೇಂದ್ರ ಮತ್ತು ಕೃಷಿ ಸಂಸ್ಕರಣೆ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ADVERTISEMENT

ನಂತರ 4.45 ಗಂಟೆಗೆ ಬಳ್ಳಾರಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಮುಖ್ಯ ಕಚೇರಿಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಪರಿಶೀಲನೆ ನಡೆಸುವರು. ಬಳಿಕ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಅ.17 ರಂದು ಬಳ್ಳಾರಿಯಿಂದ ವಿಜಯನಗರ ಜಿಲ್ಲೆಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.