ADVERTISEMENT

ವಿಶ್ವ ತಂಬಾಕು ವಿರೋಧಿ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 31 ಮೇ 2019, 11:55 IST
Last Updated 31 ಮೇ 2019, 11:55 IST
ವಿಶ್ವ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ ಶುಕ್ರವಾರ ಹೊಸಪೇಟೆಯಲ್ಲಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಗಣ್ಯರು ಚಾಲನೆ ನೀಡಿದರು
ವಿಶ್ವ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ ಶುಕ್ರವಾರ ಹೊಸಪೇಟೆಯಲ್ಲಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಗಣ್ಯರು ಚಾಲನೆ ನೀಡಿದರು   

ಹೊಸಪೇಟೆ: ತಾಲ್ಲೂಕು ಆರೋಗ್ಯ ಇಲಾಖೆಯಿಂದ ಶುಕ್ರವಾರ ನಗರದಲ್ಲಿ ವಿಶ್ವ ತಂಬಾಕು ವಿರೋಧಿ ದಿನ ಆಚರಿಸಲಾಯಿತು.

ಹಳೆ ಸರ್ಕಾರಿ ಆಸ್ಪತ್ರೆಯಲ್ಲಿ ತಾಲ್ಲೂಕು ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಅಧ್ಯಕ್ಷ ಅಶ್ವಿನ್‌ ಕೋತಂಬ್ರಿ ಜಾಥಾಗೆ ಚಾಲನೆ ನೀಡಿದರು. ಪ್ರಮುಖ ಮಾರ್ಗಗಳ ಮೂಲಕ ಹಾದು ಹೋದ ಜಾಥಾ ರೋಟರಿ ವೃತ್ತದಲ್ಲಿ ಕೊನೆಗೊಂಡಿತು.

ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ಹೊಂದಿದ್ದ ಫಲಕಗಳನ್ನು ಹಿಡಿದುಕೊಂಡು ಆರೋಗ್ಯ ಇಲಾಖೆ ಮತ್ತು ಆಶಾ ಕಾರ್ಯಕರ್ತೆಯರು ಹೆಜ್ಜೆ ಹಾಕಿದರು.

ADVERTISEMENT

ಕಾನೂನು ಸೇವೆಗಳ ಪ್ರಾಧಿಕಾರದ ಕರುಣಾನಿಧಿ ಮಾತನಾಡಿ, ‘ತಂಬಾಕು ಸೇವನೆಯಿಂದ ಅನೇಕ ಜನ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಇದು ಒಳ್ಳೆಯ ಅಭ್ಯಾಸವಲ್ಲ. ಆರೋಗ್ಯಯುತ ಜೀವನ ನಡೆಸಬೇಕಾದರೆ ತಂಬಾಕು ಉತ್ಪನ್ನಗಳ ಸೇವನೆಯಿಂದ ದೂರ ಇರಬೇಕು’ ಎಂದು ಕಿವಿಮಾತು ಹೇಳಿದರು.

ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಆನಂದ ಚವಾಣ್‌,ಉದ್ಯಮಿ ಶ್ರೀನಿವಾಸರಾವ್‌, ಇನ್ನರ್‌ ವೀಲ್‌ ಅಧ್ಯಕ್ಷೆ ಮೇಘನಾ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಭಾಸ್ಕರ್‌, ಆರೋಗ್ಯ ಶಿಕ್ಷಣ ಅಧಿಕಾರಿ ಎಂ.ಪಿ. ದೊಡ್ಡಮನಿ, ದಂತ ವೈದ್ಯಕೀಯ ಸಂಘದ ವೆಂಕಟೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.