ADVERTISEMENT

ಕಮಲಾಪುರ ಪಟ್ಟಣ ಪಂಚಾಯಿತಿ ; 103 ನಾಮಪತ್ರ ಕ್ರಮಬದ್ಧ

​ಪ್ರಜಾವಾಣಿ ವಾರ್ತೆ
Published 17 ಮೇ 2019, 13:55 IST
Last Updated 17 ಮೇ 2019, 13:55 IST

ಹೊಸಪೇಟೆ: ತಾಲ್ಲೂಕಿನ ಕಮಲಾಪುರ ಪಟ್ಟಣ ಪಂಚಾಯಿತಿ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಶುಕ್ರವಾರ ನಡೆದಿದ್ದು, ಎಲ್ಲ 103 ನಾಮಪತ್ರಗಳು ಕ್ರಮಬದ್ಧವಾಗಿವೆ.

ಮೇ 20ರಂದು ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಹಿಂಪಡೆಯಬಹುದು. ಒಟ್ಟು 20 ವಾರ್ಡ್‌ಗಳಿಗೆ ಚುನಾವಣೆಯ ನಡೆಯಬೇಕಿದೆ. ಕಾಂಗ್ರೆಸ್‌ನಿಂದ ಒಟ್ಟು 37, ಬಿಜೆಪಿಯಿಂದ 31 ಜನ ಉಮೇದುವಾರಿಕೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ನಿಂದ 17 ಜನ, ಬಿಜೆಪಿಯಿಂದ 11 ಜನ ನಾಮಪತ್ರ ಹಿಂಪಡೆಯಬೇಕಿದ್ದು, ಯಾರು ಕಣದಿಂದ ಹಿಂದೆ ಸರಿಯಲಿದ್ದಾರೆ ಎಂಬ ಕುತೂಹಲ ಮೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT