
ಪ್ರಜಾವಾಣಿ ವಾರ್ತೆ
ಬಳ್ಳಾರಿ: ‘ನವೆಂಬರ್ ತಿಂಗಳು ಆರಂಭವಾಗಿದೆ ಎಂದರೆ, ನವೆಂಬರ್ ಕ್ರಾಂತಿ ಮುಗಿದಿದೆ ಎಂದೇ ಅರ್ಥ’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಶನಿವಾರ ಇಲ್ಲಿ ಹೇಳಿದರು.
‘ಕೃಷಿಕ ಸಮಾಜ’ದ ಕಟ್ಟಡ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನರ‍್ರಚನೆ ವಿಚಾರಗಳನ್ನು ವರಿಷ್ಠರು ತೀರ್ಮಾನಿಸುತ್ತಾರೆ’ ಎಂದರು.
‘ವಿರೋಧಪಕ್ಷಗಳು ಮಾಧ್ಯಮಗಳನ್ನು ಬಳಸಿಕೊಂಡು ಗೊಂದಲ ಸೃಷ್ಟಿಸುತ್ತಿವೆ. ಸರ್ಕಾರ ಬಂದು ಎರಡೂವರೆ ವರ್ಷವಾಗಿದೆ. ಹೀಗಾಗಿ ಸಂಪುಟ ಪುನರ್ ರಚನೆ ಮಾತು ಕೇಳಿ ಬರುತ್ತಿದೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ’ ಎಂದು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.