ADVERTISEMENT

ಸಿರುಗುಪ್ಪ | ನರೇಗಾ: ರೈತರಿಂದ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 27 ಮೇ 2025, 15:37 IST
Last Updated 27 ಮೇ 2025, 15:37 IST

ಸಿರುಗುಪ್ಪ: ತೋಟಗಾರಿಕೆ ಇಲಾಖೆಯ ಮೂಲಕ ಅನುಷ್ಠಾನಗೊಳ್ಳುತ್ತಿರುವ ಫಲಾನುಭವಿ ಆಧಾರಿತ ನರೇಗಾ ಯೋಜನೆಯಡಿ ಸಹಾಯಧನ ನೀಡಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸಣ್ಣ, ಅತಿ ಸಣ್ಣ ರೈತರಿಗೆ ಬಾಳೆ, ಅಂಜೂರ, ತಾಳೆಬೆಳೆ, ದಾಳಿಂಬೆ, ಸಪೋಟ, ಮಾವು, ನುಗ್ಗೆ, ತೆಂಗು, ಪಪ್ಪಾಯ ಮತ್ತು ಪೇರಲ ಬೆಳೆ ಬೆಳೆಯಲು ಅರ್ಜಿ ಆಹ್ವಾನಿಸಲಾಗಿದೆ.

ನೀರಾವರಿ ಸೌಕರ್ಯವುಳ್ಳ ರೈತರು ತಮ್ಮ ಜಮೀನುಗಳಲ್ಲಿ ಕಾಮಾಗಾರಿಗಳನ್ನು ಕೈಗೊಂಡಲ್ಲಿ ನರೇಗಾ ಯೋಜನೆಯ ಅನುದಾನ ಬಳಸಿ ಕೂಲಿ ಮೊತ್ತವನ್ನು ಮತ್ತು ಸಾಮಗ್ರಿ ವೆಚ್ಚವನ್ನು ಪಾವತಿ ಮಾಡಲಾಗುವುದು.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊಸ ಪ್ರದೇಶ ವಿಸ್ತರಣೆ, ದಾಳಿಂಬೆ, ಅಂಜೂರ, ಈರುಳ್ಳಿ ಶೇಖರಣಾ ಘಟಕ ಹಾಗೂ ಯಾಂತ್ರೀಕರಣ ಯೋಜನೆಯಡಿ ಸಹಾಯಧನ ನೀಡಲಾಗುವುದು.

ADVERTISEMENT

‘2025-26ನೇ ಸಾಲಿಗಾಗಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಹನಿ ನೀರಾವರಿ ಸೌಲಭ್ಯವನ್ನು ನೀಡಲಾಗುವುದು. ತಾಳೆ ಬೆಳೆ ರೈತರಿಗೆ ಹೊಸ ಪ್ರದೇಶ ವಿಸ್ತರಣೆ ಮಾಡಲು ಇಲಾಖಾ ವತಿಯಿಂದ ತಾಳೆ ಸಸಿಗಳನ್ನು ನೀಡಲಾಗುವುದು’ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹೇಶ ಹೀರೆಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗಾಗಿ ಹೋಬಳಿವಾರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.