ಪ್ರಾತಿನಿಧಿಕ ಚಿತ್ರ
ಮರಿಯಮ್ಮನಹಳ್ಳಿ: ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುಳಾ ಅವರು ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಗುರುವಾರ ಕೇಂದ್ರದ ಗುತ್ತಿಗೆ ಆಧಾರಿತ ಶುಶ್ರೂಷಕಿ ಕೆ.ಸುನೀತಾ ಎಂಬುವರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಪಟ್ಟಣದ ಮುಖಂಡರು ಕೇಂದ್ರಕ್ಕೆ ಭೇಟಿ ನೀಡಿ, ‘ಸಿಬ್ಬಂದಿಗೆ ಮಾನಸಿಕ ಕಿರುಕುಳ ನೀಡುತ್ತಿರುವ ಡಾ.ಮಂಜುಳಾ ಅವರನ್ನು ಕೂಡಲೇ ವರ್ಗಾವಣೆ ಮಾಡಿ’ ಎಂdಉ ತಾಲ್ಲೂಕು ಪ್ರಭಾರ ವೈದ್ಯಾಧಿಕಾರಿ ಡಾ.ವಿನೋದ್ ಅವರಿಗೆ ಮನವಿ ಸಲ್ಲಿಸಿದರು.
ಡಾ. ವಿನೋದ ಮಾತನಾಡಿ, ‘ವೈದ್ಯಾಧಿಕಾರಿ ಡಾ.ಮಂಜುಳಾ ಅವರು ಗೈರಾಗಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಯವರ ಗಮನಕ್ಕೆ ತಂದು ಕ್ರಮ ಕೈಗೊಳ್ಳುವುದರ ಜೊತೆಗೆ ಬೇರೆಡೆಗೆ ತಾತ್ಕಾಲಿಕ ನಿಯೋಜನೆ ಮಾಡಲಾಗುವುದು’ ಎಂದರು.
ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ, ಮಂಜುನಾಥ, ಪ್ರಸನ್ನ ಸೇರಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೋವಿಂದರ ಪರಶುರಾಮ, ಮುಖಂಡರಾದ ಎಲೆಗಾರ ಮಂಜುನಾಥ, ಪಿ.ಸೋಮಪ್ಪ, ವಿಶ್ವನಾಥ, ರಾಜ, ಎಚ್.ರಮೇಶ್, ಜಿ.ವಿರೂಪಾಕ್ಷ, ಬಸವರಾಜ, ಕೆ.ಮಂಜುನಾಥ, ಪರಶುರಾಮ, ಅಂಕ್ಲೇಶ್ ಇದ್ದರು.