ತೋರಣಗಲ್ಲು: ಇಲ್ಲಿಗೆ ಸಮೀಪದ ವಡ್ಡು ಗ್ರಾಮದ ಕೊರಚರ ಚೆನ್ನಪ್ಪ (55) ಎಂಬುವವರು ವಡ್ಡು ಗ್ರಾಮದ ಹೊರವಲಯದ ನಾರಿಹಳ್ಳದ ದಂಡೆಯಲ್ಲಿ ಮನೆಯ ಕೆಲಸಕ್ಕಾಗಿ ಲಕ್ಕಿಗೀಡವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ನೀರಿನ ರಭಸಕ್ಕೆ ಭಾನುವಾರ ಸಂಜೆ ಕೊಚ್ಚಿಕೊಂಡು ಹೋಗಿದ್ದಾರೆ.
ನಾರಿಹಳ್ಳದ ನೀರಿನ ಹರಿವಿನ ಪ್ರಮಾಣ ಕಡಿಮೆಯಾದ ಬಳಿಕ ಮೃತ ದೇಹವು ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.ಸ್ಥಳಕ್ಕೆ ಗಾದಿಗನೂರು ಠಾಣೆಯ ಪೊಲೀಸರು ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.