ADVERTISEMENT

ಬಳ್ಳಾರಿ | ಉತ್ತರ ಪ್ರದೇಶದಿಂದ ಬಂದವನಿಗೆ ಕೋವಿಡ್, ಸೋಂಕಿತರ ಸಂಖ್ಯೆ 38 

​ಪ್ರಜಾವಾಣಿ ವಾರ್ತೆ
Published 27 ಮೇ 2020, 5:28 IST
Last Updated 27 ಮೇ 2020, 5:28 IST
ಕೊರೊನಾ ವೈರಸ್‌
ಕೊರೊನಾ ವೈರಸ್‌    

ಹೊಸಪೇಟೆ: ಇತ್ತೀಚೆಗೆ ಉತ್ತರ ಪ್ರದೇಶದಿಂದ ಬಂದು ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಗೆ ಕೋವಿಡ್-19 ಇರುವುದು ದೃಢಪಟ್ಟಿದೆ.

ಇದರೊಂದಿಗೆ ಬಳ್ಳಾರಿ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 38 ಆಗಿದ್ದು, 16 ಮಂದಿ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದಾರೆ.

ಉತ್ತರ ಪ್ರದೇಶದಿಂದ ಬಂದ ವ್ಯಕ್ತಿ ಕ್ವಾರಂಟೈನ್‌ನಲ್ಲಿದ್ದರು. ಅವರ ಗಂಟಲು ದ್ರವದ ಪರೀಕ್ಷೆಯಿಂದ ಕೋವಿಡ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.