ಹೂವಿನಹಡಗಲಿ: ಈರುಳ್ಳಿ ಮೇಲಿನ ರಫ್ತು ಸುಂಕದಲ್ಲಿ ಶೇ 20ರಷ್ಟನ್ನು ಕಡಿತಗೊಳಿಸುವ ಕೇಂದ್ರ ಸರ್ಕಾರದ ತೀರ್ಮಾನ ಸ್ವಾಗತಾರ್ಹ ಎಂದು ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್.ಎಂ.ಸಿದ್ದೇಶ ತಿಳಿಸಿದ್ದಾರೆ.
ದೇಶದಲ್ಲಿ ಈರುಳ್ಳಿ ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ರಫ್ತು ಸುಂಕ ಕಡಿತದಿಂದ ರೈತರಿಗೆ ಕೊಂಚ ಅನುಕೂಲವಾಗುವ ನಿರೀಕ್ಷೆ ಇದೆ. ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕುಸಿದಾಗ ಕೇಂದ್ರ ಸರ್ಕಾರ ತಾಲ್ಲೂಕು ಮಟ್ಟದಲ್ಲಿ ಖರೀದಿ ಕೇಂದ್ರ ತೆರೆದು ನಾಪೇಡ್ ಮೂಲಕ ₹4000 ಬೆಂಬಲ ಬೆಲೆಯಲ್ಲಿ ರೈತರಿಂದ ನೇರವಾಗಿ ಖರೀದಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.