ವಂಚನೆ (ಪ್ರಾತಿನಿಧಿಕ ಚಿತ್ರ)
ಬಳ್ಳಾರಿ: ವಾಟ್ಸ್‌ಆ್ಯಪ್‌ಗೆ ಬಂದಿದ್ದ ಎಪಿಕೆ ಎಂಬ ಫೈಲ್ ಕ್ಲಿಕ್ ಮಾಡಿದ ನಗರದ ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರೊಬ್ಬರು ₹7.99 ಲಕ್ಷ ಕಳೆದುಕೊಂಡಿದ್ದಾರೆ.
‘ನನ್ನ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ತೆಗೆದುಕೊಳ್ಳುವ ಉದ್ದೇಶದಿಂದಲೇ ಅಪರಿಚಿತರು ಎಪಿಕೆ ಫೈಲ್ ಅನ್ನು ನನ್ನ ಮೊಬೈಲ್‌ಗೆ ಕಳುಹಿಸಿದ್ದರು. ಅದನ್ನು ತಿಳಿಯದೇ ಕ್ಲಿಕ್ ಮಾಡಿದ್ದರಿಂದ ಹಣ ನನ್ನ ಹಣ ಹಂತ ಹಂತವಾಗಿ ಕಡಿತವಾಗಿದೆ’ ಎಂದು ಅವರು ದೂರಿದ್ದಾರೆ.
ಈ ಕುರಿತು ಬಳ್ಳಾರಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.