
ಪ್ರಜಾವಾಣಿ ವಾರ್ತೆ
ವಂಚನೆ
ಬಳ್ಳಾರಿ: ಹೆಚ್ಚಿನ ಲಾಭಾಂಶದ ಆಮಿಷವೊಡ್ಡಿ ಕಂಪ್ಲಿಯ
ವ್ಯಕ್ತಿಯೊಬ್ಬರಿಗೆ ಆನ್‌ಲೈನ್‌ನಲ್ಲಿ ₹11.48 ಲಕ್ಷ ವಂಚಿಸಲಾಗಿದೆ.
‘ಅಪರಿಚಿತನೊಬ್ಬ ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿದ್ದ. ಲಿಂಕ್ ಕ್ಲಿಕ್ ಮಾಡಿದಾಗ ಟೆಲಿಗ್ರಾಂ ಗ್ರೂಪ್‌ವೊಂದಕ್ಕೆ ಸೇರಿಸಲಾಗಿತ್ತು. ಹಣ ಹೂಡಿಕೆ, ಲಾಭಾಂಶದ ಕುರಿತು ಗ್ರೂಪ್‌ನಲ್ಲಿ ಆಮಿಷವೊಡ್ಡಿ ಹಂತ ಹಂತವಾಗಿ ₹11,48,651 ವರ್ಗಾಯಿಸಿಕೊಂಡು ವಂಚಿಸಲಾಗಿದೆ’ ಎಂದು ಮೋಸ ಹೋದ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.
ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.