
ಸೈಬರ್ ವಂಚನೆ
ಬಳ್ಳಾರಿ: ಅಧಿಕ ಲಾಭಾಂಶದ ಆಮಿಷವೊಡ್ಡಿ ಜಿಂದಾಲ್‌ನ ಉದ್ಯೋಗಿಯೊಬ್ಬರಿಗೆ ಆನ್‌ಲೈನ್‌ಲ್ಲಿ ₹38 ಲಕ್ಷ ವಂಚನೆ ಮಾಡಲಾಗಿದೆ.
ದುಡ್ಡು ಕಳೆದುಕೊಂಡ ವ್ಯಕ್ತಿ ನೀಡಿದ ದೂರು ಆಧರಿಸಿ ನಗರದ ‘ಸೈಬರ್ ಅಪರಾಧ, ಆರ್ಥಿಕ ಅಪರಾಧಗಳು ಮತ್ತು ಮಾಧಕ ದ್ರವ್ಯ ಠಾಣೆ (ಸಿಇಎನ್)’ ಪೊಲೀಸರು ಸೋಮವಾರ ಎಫ್‌ಐಆರ್ ದಾಖಲಿಸಿದ್ದಾರೆ.
ದೂರದಾರ ವ್ಯಕ್ತಿ ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ಬಂದಿದ್ದ ಜಾಹೀರಾತಿನ ಲಿಂಕ್ ಒತ್ತಿದ್ದರು ಎನ್ನಲಾಗಿದೆ. ಕೂಡಲೇ ವ್ಯಕ್ತಿಯನ್ನು ಷೇರು ಮಾರುಕಟ್ಟೆಗೆ ಸಂಬಂಧಿಸಿದ ವಾಟ್ಸ್‌ಆ್ಯಪ್ ಗ್ರೂಪ್‌ಗೆ ಸೇರಿಸಲಾಗಿತ್ತು. ಅಲ್ಲಿ ಷೇರುಗಳ ಕುರಿತು ಮಾಹಿತಿ ನೀಡಲಾಗಿತ್ತು ಎನ್ನಲಾಗಿದೆ. ಬಳಿಕ ಶೇ 200ರ ಲಾಭಾಂಶದ ಆಮಿಷವೊಡ್ಡಿ ವಂಚಕರು ಹಂತ ಹಂತವಾಗಿ ₹38,41,570 ಹಣ ಹಾಕಿಸಿಕೊಂಡಿದ್ದಾರೆ. ಕಡೆಗೆ ಲಾಭಾಂಶವೂ ಇಲ್ಲದೇ, ಹೂಡಿಕೆ ಮಾಡಿದ ಹಣವನ್ನೂ ಹಿಂದಕ್ಕೆ ಪಡೆಯಲಾಗದೆ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.