ಕಂಪ್ಲಿ: ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಳಿಸುವುದನ್ನು ಇಲ್ಲಿಯ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಪದಾಧಿಕಾರಿಗಳು ವಿರೋಧಿಸಿದರು.
ಈ ಕುರಿತ ಮನವಿಯನ್ನು ಸ್ಥಳೀಯ ಜೆಸ್ಕಾಂ ಕಚೇರಿಯ ಸಹಾಯಕ ಎಂಜಿನಿಯರ್ ವಿನೋದ್‍ಕುಮಾರ್ ಬ್ಯಾಲಾಳ್ ಅವರಿಗೆ ಬುಧವಾರ ಸಲ್ಲಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಗಂಗಾಧರ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ನಡೆಸುತ್ತಿರುವ ಪ್ರಯತ್ನವನ್ನು ತಕ್ಷಣ ಕೈಬಿಡಬೇಕು’ ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಸ್ಮಾರ್ಟ್ ಕಾರ್ಡ್ ಮತ್ತು ಡಿಜಿಟಲ್ ಮೀಟರ್ ಅಳವಡಿಸಲು ₹ 10,000 ಠೇವಣಿ ಶುಲ್ಕ ನಿಗದಿಪಡಿಸಿರುವುದನ್ನು ಕೂಡಲೇ ಹಿಂಪಡೆಯಬೇಕು. ಈ ಹಿಂದೆ ಅಕ್ರಮ-ಸಕ್ರಮದಡಿ ರೈತರಿಗೆ ವಿದ್ಯುತ್ ಉಪಕರಣಗಳನ್ನು ಒದಗಿಸಿದಂತೆಯೇ ಉಚಿತ ವಿದ್ಯುತ್ ನೀಡಬೇಕು. ವಿದ್ಯುತ್ ಸಂಪರ್ಕಕ್ಕೆ ರೈತರ ಆಧಾರ್ ಜೋಡಣೆ ಮಾಡುವುದನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.
ಪ್ರಸ್ತುತ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ಸಂಘದ ಗೌರವ ಅಧ್ಯಕ್ಷ ಬಿ. ಹನುಮಂತಪ್ಪ, ಉಪಾಧ್ಯಕ್ಷ ಲಕ್ಷ್ಮಿರೆಡ್ಡಿ, ನಂ.10 ಮುದ್ದಾಪುರ ಘಟಕದ ಅಧ್ಯಕ್ಷ ಬಿ. ಶಂಕರ್, ಉಪಾಧ್ಯಕ್ಷ ನೀಲಪ್ಪ ಬೋವಿ, ರಾಮಸಾಗರ ಘಟಕ ಅಧ್ಯಕ್ಷ ಜೆ. ಮಂಜುನಾಥ, ಪದಾಧಿಕಾರಿಗಳಾದ ಕೆ. ಗೋವಿಂದಪ್ಪ, ಬಿ. ಕುಬೇರಪ್ಪ, ಬಿ. ಶಿವಪ್ಪ, ಯು. ಹುಲುಗಪ್ಪ, ಬಿ. ಶಿವಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.