ADVERTISEMENT

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕರವೇ ವಿರೋಧ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 8:39 IST
Last Updated 17 ನವೆಂಬರ್ 2020, 8:39 IST
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರ್ ಶರಣಮ್ಮ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಶೀಲ್ದಾರ್ ಶರಣಮ್ಮ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.    

ಹಗರಿಬೊಮ್ಮನಹಳ್ಳಿ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ )ಸದಸ್ಯರು ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು.

ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಬುಡ್ಡಿ ಬಸವರಾಜ್ ಮಾತನಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕನ್ನಡಿಗರಿಗೆ ದ್ರೋಹ ಬಗೆಯುವ ಕಾರ್ಯಕ್ಕೆ ಮುಂದಾಗಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದರ ಮೂಲಕ ಕನ್ನಡಿಗರನ್ನು ಕೆರಳಿಸುತ್ತಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನವನ್ನು ಕೊಡಲಾಗದ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಯಾವ ಪುರುಷಾರ್ಥಕ್ಕಾಗಿ ರಚನೆ ಮಾಡುತ್ಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮರಾಠಿಗರನ್ನು ಕನ್ನಡಿಗರ ತಲೆಯ ಮೇಲೆ ಕೂರಿಸಲು ಹೊರಟಿರುವುದನ್ನು ನೋಡಿದರೆ ಇದು ಕನ್ನಡದ್ರೋಹಿ ಕೆಲಸ ಎನ್ನಲೇಬೇಕು ಎಂದರು.

ADVERTISEMENT

ಕೂಡಲೇ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದನ್ನು ಕೈಬಿಟ್ಟು ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಮೂಲಕ ಕನ್ನಡ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನವನ್ನು ಕೊಡುವ ಕೆಲಸವನ್ನು ರಾಜ್ಯ ಸರ್ಕಾರ ಮುಂದಾಗಲಿ ಎಂದರು.

ತಹಶೀಲ್ದಾರ್ ಶರಣಮ್ಮ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ವೇದಿಕೆ ಮುಖಂಡರಾದ ವಿಶ್ವನಾಥ್. ರಮೇಶ್. ಪಕೀರಪ್ಪ .ವೀರೇಶ್. ಎಚ್.ಮಂಜುನಾಥ್. ಪಾಂಡು ನಾಯಕ. ಲೋಕೇಶ್. ಹನುಮಂತ. ಕಾಳೇಶ್. ಕರಿಯಪ್ಪ .ತಿಪ್ಪಣ್ಣ. ನಾಗರಾಜ್ ಕಾಶಿಮ್ . ಕಡ್ಲೆ ಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.