ADVERTISEMENT

ಕಸಾಯಿಖಾನೆಗೆ ಸಾಗಿಸುತ್ತಿದ್ದ 29 ಎತ್ತುಗಳ ರಕ್ಷಣೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 3:01 IST
Last Updated 4 ಮಾರ್ಚ್ 2026, 3:01 IST

ಸಿರುಗುಪ್ಪ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಗೋರಕ್ಷಕರು ಹಾಗೂ ವಿವಿಧ ಸಂಘಟನೆಯ ಮುಖಂಡರು ತಡೆದು ರಕ್ಷಿಸಿರುವ ಘಟನೆ ಮಂಗಳವಾರ ನಡೆಯಿತು.

ಮಂಗಳವಾರ ಮುಂಜನೆ ಬೆಳಗಾವಿ ಜಿಲ್ಲೆಯ ನಿಪ್ಪಣಿಯಿಂದ ಸಿರುಗುಪ್ಪ ಮೂಲಕ ಕೇರಳದ ಕಾಸರಗೋಡಿಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಕಂಟೇನರ್ ಲಾರಿಯನ್ನು ರಾಷ್ಟ್ರೀಯ ಹೆದ್ದಾರಿ 150ಎ ರಸ್ತೆಯಲ್ಲಿ ನಗರದ ಅಭಯಾಂಜನೇಯ್ಯ ಸ್ವಾಮಿ ದೇವಸ್ಥಾನದ ಹತ್ತಿರ ತಡೆದು ನಿಲ್ಲಿಸಿ ತಪಾಸಣೆ ನಡೆಸಿದರು.

ಲಾರಿಯಲ್ಲಿದ್ದ 28 ಎತ್ತುಗಳು, ಒಂದು ಕೋಣ, ಹಾಗೂ ಕಂಟೇನರ್ ಲಾರಿಯನ್ನು ವಶಪಡಿಸಿಕೊಳ್ಳಲಾಯಿತು. ಲಾರಿ ಚಾಲಕ ಹುಸೇನ್‌ರ, ಸಹಾಯಕ ಸೌತಾಲಿಖಾನ್ ವಿರುದ್ಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ADVERTISEMENT

ವಶಪಡಿಸಿಕೊಂಡ ಜಾನುವಾರುಗಳನ್ನು ಕೊಪ್ಪಳ ಜಿಲ್ಲೆಯ ಆನೆಗುಂದಿ ಗ್ರಾಮದ ದುರ್ಗಾದೇವಿ ಗೋಶಾಲೆಗೆ ಸಾಗಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.